CHITRADURGA NEWS | 11 JUNE 2026
ಚಿತ್ರದುರ್ಗ: 2026-27ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಬಿಐಇಆರ್‍ಟಿ ಹಾಗೂ ಪ್ರೌಢ ಬಿಐಇಆರ್‍ಟಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ನೇರಗುತ್ತಿಗೆ ಮೂಲಕ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಶಾಸಕ ಟಿ.ರಘುಮೂರ್ತಿ BIRTH DAY | ಚಿತ್ರದುರ್ಗದಲ್ಲಿ ಅದ್ದೂರಿ ಸೆಲೆಬ್ರೇಷನ್
ಜೂನ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ, ಪ್ರಾಥಮಿಕ ಬಿಐಇಆರ್‍ಟಿ ಹುದ್ದೆಗೆ ಡಿ.ಇಡಿ ಇನ್ ಸ್ಪೆಷಲ್ ಎಜುಕೇಷನ್ ಜೊತೆಗೆ Valid RCI CRR number ಮತ್ತು ಪ್ರೌಢ ಬಿಐಇಆರ್‍ಟಿ ಹುದ್ದೆಗೆ ಬಿ.ಇಡಿ ಇನ್ ಸ್ಪೆಷಲ್ ಎಜುಕೇಷನ್ ಜೊತೆಗೆ Valid RCI CRR number ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಜೂನ್ 18ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ದೃಢೀಕೃತ ದಾಖಲೆಗಳೊಂದಿಗೆ ಅರ್ಜಿಯನ್ನು ಮುದ್ದಾಂ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಈ ಕಚೇರಿಗೆ ಸಲ್ಲಿಸಬಹುದು.
ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
