
CHITRADURGA NEWS | 23 JULY 2025
ಚಿತ್ರದುರ್ಗ: ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅವರು 10 ಖಾಯಂ ಚಾಲಕ ಹುದ್ದೆಗಳಿಗೆ 43 ವರ್ಷದೊಳಗಿನ SHAPE-1 ಮೆಡಿಕಲ್ ಕ್ಯಾಟಗೇರಿ ಹೊಂದಿರುವ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸಿರಿಗೆರೆ ಮಠದಲ್ಲಿ ಆಗಸ್ಟ್ 10 ಮತ್ತು 11 ರಂದು ರಾಜ್ಯಮಟ್ಟದ ವೀರಗಾಸೆ ಸ್ಪರ್ಧೆ
ವೇತನ ಶ್ರೇಣಿ 20500-3%-79000 ಮತ್ತು ಇತರೆ ಭತ್ಯೆಗಳು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 06 ಕೊನೆಯ ದಿನವಾಗಿದೆ.
ಅರ್ಜಿಯನ್ನು ವೆಬ್‍ಸೈಟ್ www.bel-india.in/careers ನಲ್ಲಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೂತನ ಸಿಇಓ ಆಗಿ ಡಾ.ಆಕಾಶ್ ನೇಮಕ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22195650 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
