
CHITRADURGA NEWS | 04 NOVEMBER 2025
ಚಿತ್ರದುರ್ಗ: ಯುವನಿಧಿ ಯೋಜನೆಯಡಿ 2022-23, 2023-24 ಹಾಗೂ 2024-25 ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲಮೋ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಬಹುದು.
ಆಸಕ್ತರು ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಜಿಲ್ಲೆಯಲ್ಲಿ ಮುಂದಿನ ಒಂದು ವಾರದ ಮಳೆ ಕುರಿತ ವರದಿ
ಈಗಾಗಲೇ ಯುವನಿಧಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ತ್ರೈಮಾಸಿಕಕ್ಕೆ ಬದಲಾಗಿ ಮಾಸಿಕವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9945587060, 7019755147 ಕರೆ ಮಾಡುವಂತೆ ಅಥವಾ ಸ್ಟೇಡಿಯಂ ರಸ್ತೆಯ ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ಭೇಟಿ ನೀಡುವಂತೆ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
