
CHITRADURGA NEWS | 21 JULY 2026
ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿಗಳು, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಭಿಕ್ಷೆಗೆ ಒಂದು ಸಾಮಾಜಿಕ ಮೌಲ್ಯ ಕೊಟ್ಟವರು ಗುರುಮಲ್ಲೇಶ್ವರರು
2026-27ನೇ ಸಾಲಿನ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, 2025ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದರೊಂದಿಗೆ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27ನೇ ಸಾಲಿನ ಗುರಿ-ಒಲಂಪಿಕ್ ಪದಕ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿ ಸೌಲಭ್ಯಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಸರ್ಕಾರದ ಅಧಿಕೃತ ಸೇವಾಸಿಂಧು ಜಾಲತಾಣದ https://sevasindhu.karnataka.
ಇದನ್ನೂ ಓದಿ: ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆಗೆ ಗಮನಹರಿಸಿ | ನ್ಯಾ.ಜಿ.ಡಿ.ಮಹಾವರ್ಕರ್
ಹೆಚ್ಚಿನ ಮಾಹಿತಿಗಾಗಿ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-235635 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

