ಮುಖ್ಯ ಸುದ್ದಿ
ಪ್ರವಾಸೋದ್ಯಮ ಇಲಾಖೆಯಲ್ಲಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

CHITRADURGA NEWS | 19 FEBRUARY 2025
ಚಿತ್ರದುರ್ಗ: ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್, ಮಲ್ಟಿ ಕ್ಯೂಸಿನ್ ಕುಕ್ ಮತ್ತು ರೂಂ ಅಟೆಂಡೆಟ್‍ಗೆ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.
Also Read: ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ
ಫೆ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್‍ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಅವರ ಮೂಲಕ ವಸತಿ ಸಹಿತ ತರಬೇತಿ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್, ರೂಂ ಅಟೆಂಡೆಂಟ್ ವಿಭಾಗದಲ್ಲಿ ನಾಲ್ಕು ತಿಂಗಳ ತರಬೇತಿ ಹಾಗೂ ಮಲ್ಟಿ ಕ್ಯೂಸಿನ್ ಕುಕ್ ವಿಭಾಗದಲ್ಲಿ 5 ತಿಂಗಳ ತರಬೇತಿ ಪಡೆಯಲು ಇಚ್ಚಿಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Also Read: ಮಾ.1 ರಿಂದ 20 ರವರೆಗೆ PUC ಎಕ್ಸಾಮ್ | ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳು | 15991 ವಿದ್ಯಾರ್ಥಿಗಳು
ಇದೇ ಫೆ.18 ರಿಂದ ನಗರದ ಕೋಟೆ ಮುಂಭಾಗದ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಫೆ.24ರ ಸಂಜೆ 4.30ರೊಳಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
