CHITRADURGA NEWS | 10 SEPTEMBER 2026
ಚಿತ್ರದುರ್ಗ: ತೆಲಂಗಾಣ ಸರ್ಕಾರದ ‘ಯಂಗ್ ಇಂಡಿಯಾ ಫಿಜಿಕಲ್ ಎಜುಕೇಷನ್ ಅಂಡ್ ಸ್ಪೋಟ್ರ್ಸ್ ಯೂನಿವರ್ಸಿಟಿ’ ವತಿಯಿಂದ 2036ರ ಒಲಿಂಪಿಕ್ಸ್ ಗುರಿಯನ್ನಿಟ್ಟುಕೊಂಡು ‘ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್’ ಕಾರ್ಯಕ್ರಮಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ
ದೇಶದಲ್ಲೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ಈ 11 ತಿಂಗಳ ವಸತಿ ಸಹಿತ ಫೆಲೋಷಿಪ್ ಕಾರ್ಯಕ್ರಮವು ಅಕ್ಟೋಬರ್ 2026 ರಿಂದ ಪ್ರಾರಂಭವಾಗಲಿದೆ. ಕ್ರೀಡಾ ಹಿನ್ನೆಲೆಯುಳ್ಳ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿಯಿರುವ 21 ರಿಂದ 28 ವರ್ಷ ವಯೋಮಿತಿಯ ಪದವೀಧರ ಅಭ್ಯರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಒಟ್ಟು 30 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಇದರಲ್ಲಿ 20 ಸೀಟುಗಳಿಗೆ ಸ್ಕಾಲರ್‍ಶಿಪ್ ಸೌಲಭ್ಯವಿರಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 15 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್ ರವಿಶಂಕರ್ ಉತ್ತರ ಏನು ?
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://yipesu.telangana.gov.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

