CHITRADURGA NEWS | 27 MAY 2025
ಚಿತ್ರದುರ್ಗ: 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
Also Read: ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಡಿ ದಾಳಿಂಬೆ, ಕಂದು ಬಾಳೆ/ಅಂಗಾಂಶ ಬಾಳೆ, ಪಪ್ಪಾಯ, ಡ್ರಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರೆಡ್ ತರಕಾರಿ, ಕಟ್ ಪ್ಲವರ್ಸ್ (ಗುಲಾಬಿ, ಜೆರ್ಬೆರಾ, ಕಾರ್ನೇಷನ್) ಸುಗಂಧರಾಜ ಹೂವುಗಳು, ಬಿಡಿ ಹೂವುಗಳ ಮತ್ತು ಕರಿಮೆಣಸು.
ಬಹುವಾರ್ಷಿಕ ಸಾಂಬಾರು ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು ಅಣಬೆ ಉತ್ಪಾದನಾ ಘಟಕ, ಪುನಶ್ಚತನ ಕಾರ್ಯಕ್ರಮ, ಪಾಲಿಥೀನ್ ನರ್ಸರಿ ಘಟಕ, ಪಕ್ಷಿ ನಿರೋದಕ ಬಲೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪಾಲಿಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ಕಳೆ ನಿಯಂತ್ರಕ ಮ್ಯಾಟ್ (ವೀಡ್ ಮ್ಯಾಟ್), ತರಕಾರಿ ಬೆಳೆಗಳಿಗೆ ಆಧಾರ ನೀಡುವ ವ್ಯವಸ್ಥೆ, ಎರೆಹುಳು ಗೊಬ್ಬರ ಘಟಕ, ಜೇನು ಪೆಟ್ಟಿಗೆ, 20 ಹೆಚ್.ಪಿ ವರೆಗಿನ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್, ಭೂಮರ್ ಸ್ಪ್ರೆಯರ್, ಶೀಥಲಗೃಹ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ, ಸೋಲಾರ್ ಕ್ರಾಪ್ ಡ್ರೈಯರ್, ಪ್ಯಾಕ್‍ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿರುತ್ತದೆ.
ಅರ್ಜಿಯನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ 2025ರ ಜೂನ್ 20 ರೊಳಗೆ ನಿಯಮಾನುಸಾರ ಸಲ್ಲಿಸಲು ಕೋರಿದೆ.
Also Read: ಮಳೆ ವರದಿ | ಜಿಲ್ಲೆಯಲ್ಲಿ ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲ್ಲೂಕಿನ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
