CHITRADURGA NEWS | 20 SEPTEMBER 2026
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳಿಗೆ ಉಚಿತವಾಗಿ ಆಹಾರ ಒದಗಿಸಲು ಆಸಕ್ತಿ ಹೊಂದಿರುವ ನೋಂದಾಯಿತ ಸ್ವಯಂಸೇವಾ ಸಂಸ್ಥೆಗಳಿಂದ ಅಭಿರುಚಿ ಪತ್ರಗಳನ್ನು ಆಹ್ವಾನಿಸಲಾಗಿದೆ.
ನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಯಾವುದೇ ಸಂಭಾವನೆ ಇಲ್ಲದೆ ಉಚಿತವಾಗಿ ಆಹಾರ ಒದಗಿಸುವ ಹಾಗೂ ಈ ಕಾರ್ಯದಲ್ಲಿ ಆಸಕ್ತಿ ಹೊಂದಿರುವ ನೋಂದಾಯಿತ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಪಂಪ್ಸೆಟ್, ಬಿಡಿಭಾಗ ವಿತರಣೆ
ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ತಮ್ಮ ನೋಂದಾವಣಿ ಪ್ರಮಾಣ ಪತ್ರ, ಸಂಸ್ಥೆಯ ವಿವರಗಳು ಹಾಗೂ ಉಚಿತವಾಗಿ ಸೇವೆ ಸಲ್ಲಿಸಲು ಸಮ್ಮತಿ ಪತ್ರವನ್ನು ಈ ಪ್ರಕಟಣೆ ಹೊರಡಿಸಿದ 07 ದಿನದೊಳಗೆ ನಗರಸಭೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರಸಭೆಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

