Connect with us

    ಬ್ಯಾಟರಿ ಚಾಲಿತ ವೀಲ್‍ಚೇರ್ | ವಿಕಲಚೇತನರಿಂದ ಅರ್ಜಿ ಆಹ್ವಾನ

    Application Invitation

    ಮುಖ್ಯ ಸುದ್ದಿ

    ಬ್ಯಾಟರಿ ಚಾಲಿತ ವೀಲ್‍ಚೇರ್ | ವಿಕಲಚೇತನರಿಂದ ಅರ್ಜಿ ಆಹ್ವಾನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 29 JANUARY 2024

    ಚಿತ್ರದುರ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ 15 ವರ್ಷ ಮೇಲ್ಪಟ್ಟ ದೈಹಿಕ ವಿಕಲಚೇತನರಿಗಾಗಿ ಬ್ಯಾಟರಿ ಚಾಲಿತ ವೀಲ್‍ಚೇರ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

    ಈ ಯೋಜನೆಯಡಿ ಪ್ರಯೋಜನ ಪಡೆಯಲು 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ವೈದ್ಯಕೀಯ ಪ್ರಮಾಣಪತ್ರ (ಶೇ.75ಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಇರುವವರಿಗೆ ಮಾತ್ರ), ಇತ್ತೀಚಿನ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ, ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯದಿರುವ ಬಗ್ಗೆ 20 ರೂ.ಗಳ ಛಾಪಕಾಗದದಲ್ಲಿ ನೋಟರಿ ದೃಢೀಕರಣ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

    ಇದನ್ನೂ ಓದಿ: ಸಮಾವೇಶಕ್ಕೆ 33 ಸಾವಿರ ಕೆಜಿ ಚಿಕನ್ ಬಿರಿಯಾನಿ

    ಈಗಾಗಲೆ ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆದಿರುವ ವಿಕಲಚೇತನರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

    ಅರ್ಜಿ ನಮೂನೆಯನ್ನುwww.dwdsc.kar.nic.in ವೆಬ್‍ಸೈಟ್‍ನಿಂದ ನೇರವಾಗಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಅಥವಾ ಜಿಲ್ಲಾ ಕಚೇರಿಯಲ್ಲಿ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಿಂದ/ ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸಿ ಪಡೆಯಬಹುದು.

    ಇದನ್ನೂ ಓದಿ: ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

    ಮಾಹಿತಿಗಾಗಿ ಎಂಆರ್‍ಡಬ್ಲ್ಯೂಗಳ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮುರು-9742725576 ಕ್ಕೆ ಸಂಪರ್ಕಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top