CHITRADURGA NEWS | 27 MARCH 2026
ಚಿತ್ರದುರ್ಗ: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ (ಎಸ್.ಟಿ) ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು, ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 04 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಅಡಿಕೆ ಧಾರಣೆ | 26 ಮಾರ್ಚ್ | ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
ಅರ್ಹ ವಿದ್ಯಾರ್ಥಿಗಳು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ತಾಲ್ಲೂಕು ಪರಿಶಿಷ್ಟ ವರ್ಗಗಳ ಕಚೇರಿಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ/ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಮೇ 04 ಸಂಜೆ 5 ಗಂಟೆಯಾಗಿರುತ್ತದೆ. ಅಪೂರ್ಣಗೊಂಡ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಕಡ್ಡಾಯವಾಗಿ ತಿರಸ್ಕರಿಸಲಾಗುವುದು.
ಷರತ್ತುಗಳು:
2026-27ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಉಚಿತವಾಗಿ ಅರ್ಹತಾ ಪರೀಕ್ಷಾ ಮೂಲಕ ಆಯ್ಕೆ ಮಾಡಲಾಗುವುದು. 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲು ಮಾಡಲಾಗುವುದು. 6ನೇ ತರಗತಿಗೆ ಮಾತ್ರ ಜಿಲ್ಲೆಗೆ ನಿಗಧಿ ಪಡಿಸಿರುವ ಗುರಿಗೆ ಅನುಗುಣವಾಗಿ ನಿಯಮಾನುಸಾರ ಪ್ರವೇಶ ಅವಕಾಶವನ್ನು ನೀಡಲಾಗುವುದು. 6ನೇ ತರಗತಿಗೆ ಮಾತ್ರ ಜಿಲ್ಲೆಗೆ ನಿಗಧಿಪಡಿಸಿರುವ ಗುರಿಗೆ ಅನುಗುಣವಾಗಿ ನಿಯಮಾನುಸಾರ ಪ್ರವೇಶ ಅವಕಾಶ ನೀಡಲಾಗುವುದು.
ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು
ವಿದ್ಯಾರ್ಥಿಯು ಪರಿಶಷ್ಟ ಪಂಗಡ ಸೇರಿದ್ದು, ಕುಟುಂಬದ ವಾರ್ಷಿಕ ಆದಾಯ ರೂ.2 ಲಕ್ಷ ಮೀರಿರಬಾರದು. ಜಾತಿ ಆದಾಯ ಪ್ರಮಾಣ ಪತ್ರ ಹಾಗೂ ದೃಢೀಕೃತ ಅಂಕಪಟ್ಟಿಯನ್ನು ಅರ್ಜಿ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು. ಮುಖ್ಯೋಪಾಧ್ಯಾಯರಿಂದ ಕಡ್ಡಾಯವಾಗಿ ಶೇಕಡವಾರು ನಮೂದಿಸಿದ ಅಂಕಪಟ್ಟಿಯನ್ನು ಮಾತ್ರ ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲಿ ಗ್ರೇಡ್‍ಅನ್ನು ನಮೂದಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರ ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು. ವಿದ್ಯಾರ್ಥಿ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟಿರಬೇಕು. ಪೋಷಕರು ಒಂದು ಬಾರಿ ಶಾಲೆಯನ್ನು ಆಯ್ಕೆಗೊಳಿಸಿದ ಮೇಲೆ ಅದೇ ಶಾಲೆಗೆ ದಾಖಲಾತಿ ಮಾಡಲಾಗುವುದು ಯಾವುದೇ ಕಾರಣಕ್ಕೂ ಶಾಲೆಯನ್ನು ಬದಲಾಯಿಸುವುದಿಲ್ಲ.
ಇದನ್ನೂ ಓದಿ: ಅಡಿಕೆ ಸಿಪ್ಪೆಯಲ್ಲಿ ಕಾಂಪೋಸ್ಟ್ ತಯಾರಿಕೆ ಕುರಿತು ತರಬೇತಿ
ಆಯ್ಕೆಯಾದ ವಿದ್ಯಾರ್ಥಿಯು ಆಯ್ಕೆಯಾದ ಶಾಲೆಯಲ್ಲಿ ಯಾವ ಪಠ್ಯಕ್ರಮ ಇರುತ್ತದೆಯೋ ಅದೇ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸ ಮಾಡಲಾಗುವುದು. ಈ ಷರತ್ತಿನಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
