CHITRADURGA NEWS | 02 AUGUST 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಹಾಲುಮಾದೇನಹಳ್ಳಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. 2025ರ ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಡಿವೈಡರ್ ಕುರಿತು ವರದಿ ಸಲ್ಲಿಸಿ, ಗುಣಮಟ್ಟದ ಸಿಸಿ ಕ್ಯಾಮರಾ ಹಾಕಿ ಜಿಲ್ಲಾಧಿಕಾರಿ
ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಹಾಲುಮಾದೇನಹಳ್ಳಿ ಗ್ರಾಮದಲ್ಲಿ 07 ಎಎವೈ, 555 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 562 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಇದನ್ನೂ ಓದಿ: ಡಿವೈಡರ್ ಬೈಕ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು
ನಿಗಧಿತ ಅರ್ಜಿ “ಎ” ನಮೂನೆಯನ್ನು ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಸಂಬಂಧಪಟ್ಟ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
