ಮುಖ್ಯ ಸುದ್ದಿ
MUNIRA A.MAKANDAR; ಆಶ್ರಯ ಸಮಿತಿ ಸದಸ್ಯರಾಗಿ ಮುನಿರಾ ಎ.ಮಕಾಂದಾರ್ ನೇಮಕ
CHITRADURGA NEWS | 10 JULY 2024
ಚಿತ್ರದುರ್ಗ: ನಗರ ಆಶ್ರಯ ಸಮಿತಿ ಸದಸ್ಯರಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಅವರು ನೇಮಕಾಗೊಂಡಿದ್ದಾರೆ.
ಇದನ್ನೂ ಓದಿ: ACADEMY; ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಎಂ.ಎನ್.ಅಹೋಬಲಪತಿ ನೇಮಕ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ನೇಮಕ ಪತ್ರ ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಐದು ಉಚಿತ ಗ್ಯಾರೆಂಟಿಗಳನ್ನು ನೀಡಿದ್ದಾರೆ. ನಿಮಗೆ ಸಿಕ್ಕಿರುವ ಅವಕಾಶವನ್ನು ಬಡವರ ಸೇವೆಗೆ ಬಳಸಿಕೊಳ್ಳಿ ಎಂದು ಸೂಚಿಸಿದರು.
ನನ್ನ ಮೇಲೆ ನಂಬಿಕೆಯಿಟ್ಟು ಆಶ್ರಯ ಸಮಿತಿ ಸದಸ್ಯೆಯನ್ನಾಗಿ ನೇಮಕ ಮಾಡಿದ್ದೀರ. ನಿಮ್ಮ ನಂಬಿಕೆಗೆ ಧಕ್ಕೆ ಬರದ ರೀತಿಯಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಡವರಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಮುನಿರಾ ಎ.ಮಕಾಂದಾರ್ ಭರವಸೆ ನೀಡಿದರು.
ಇದನ್ನೂ ಓದಿ: JYOTHI RATHAYATRE | ಕೋಟೆನಾಡಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಗ್ಯಾರೆಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಕ್ಷರುದ್ರಸ್ವಾಮಿ , ಸೇವಾದಳ ಮಹಿಳಾಧ್ಯಕ್ಷೆ ಇಂದಿರಾ ಸೇರಿದಂತೆ ಇತರರು ಇದ್ದರು.