
CHITRADURGA NEWS | 30 JANUARY 2024
ಚಿತ್ರದುರ್ಗ: ಕೇಂದ್ರ ಸರ್ಕಾರದ ನೆಹರೂ ಯುವ ಕೇಂದ್ರದ (NYKS) ಜಿಲ್ಲಾ ಸಲಹಾ ಸಮಿತಿ ಸದಸ್ಯರನ್ನಾಗಿ ಚಳ್ಳಕೆರೆಯ ಮನೋಜ್ ಹೊಸಮನೆ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಖಾತೆ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಈ ಆದೇಶ ಮಾಡಿದ್ದಾರೆ.

ಇದನ್ನೂ ಓದಿ: ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಕೆ.ಎಸ್.ನವೀನ್ ಉಸ್ತುವಾರಿ
ಈ ಹಿಂದೆ 2022 ಜನವರಿ 26 ರಂದು ಮನೋಜ್ ಹೊಸಮನೆ ಅವರನ್ನು ಚಳ್ಳಕೆರೆ ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿತ್ತು.
ಬಿಜೆಪಿ ಸಾಮಾಜಿಕ ಜಾಲಾತಾಣದ ಚಿತ್ರದುರ್ಗ ಜಿಲ್ಲಾ ಘಟಕದ ಜವಾಬ್ದಾರಿ ಹೊತ್ತಿರುವ ಮನೋಜ್ ಈಗ ನೆಹರೂ ಯುವ ಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸದಸ್ಯರಾಗಿ ಮುಂದುವರೆಯಲಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
