
CHITRADURGA NEWS | 08 NOVEMBER 2024
ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಜನರ ದಶಕಗಳ ಕನಸಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜು (Chitradurga Medical College and Research Institute) ಈಗಾಗಲೇ ಕಾರ್ಯಾರಂಭ ಮಾಡಿದ್ದು, ಈಗ ಎರಡನೇ ಬ್ಯಾಚ್ ವಿದ್ಯಾರ್ಥಿಗಳು ಎಂಬಿಬಿಎಸ್ ಅಧ್ಯಯನಕ್ಕೆ ಸೇರಿದ್ದಾರೆ.
ಸದ್ಯ ಚಿತ್ರದುರ್ಗ ಮೆಡಿಕಲ್ ಕಾಲೇಜಿನಲ್ಲಿ ಮೊದಲ ಹಾಗೂ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳ ಎರಡು ಬ್ಯಾಚ್‍ಗಳಿವೆ.
ಇದನ್ನೂ ಓದಿ: ನಗರಸಭೆಯಿಂದ ಪ್ರೋತ್ಸಾಹ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನ
ಇದನ್ನೂ ಓದಿ: ಸರ್ಕಾರಿ ಮೆಡಿಕಲ್ ಕಾಲೇಜು ಇಂದಿನಿಂದ ಆರಂಭ | ಜಿಲ್ಲೆಯ ದಶಕಗಳ ಕನಸು ನನಸು | ಇಂದು ಜಿಪಂ ಸಭಾಂಗಣದಲ್ಲಿ ಓರಿಯಂಟೇಶನ್

2022 ಏಪ್ರಿಲ್‍ನಿಂದ ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ವಿಶೇಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಯುವರಾಜ್ ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆ 2024 ನವೆಂಬರ್ 4 ರಿಂದ ಮುಂದಿನ 4 ವರ್ಷದ ಅವಧಿಗೆ ಡೀನ್ ಮತ್ತು ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ಇದನ್ನೂ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಡೀನ್ ನೇಮಕಕ್ಕೆ ವಿರೋಧ | ಡಾ.ಸಂಜೀವ್ ನೇಮಕಕ್ಕೆ ಶಿಫಾರಸ್ಸು ಮಾಡಿರುವ ಸಚಿವರ ಕ್ರಮಕ್ಕೆ ಆಕ್ಷೇಪ
ಈಗ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಕೂಡಾ ಮೆಡಿಕಲ್ ಕಾಲೇಜು ವ್ಯಾಪ್ತಿಗೆ ಸೇರಬೇಕಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರ ಮಾಡಲು ಪತ್ರ ಬರೆಯಲಾಗಿದೆ.
2022 ರಲ್ಲಿ ಚಿತ್ರದುರ್ಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದಾಗ ಕೊಠಡಿಯ ವ್ಯವಸ್ಥೆಯೇ ಇರಲಿಲ್ಲ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಆವರಣದಲ್ಲೆ ಹೊಸ ಮೆಡಿಕಲ್ ಕಾಲೇಜು | 24 ಹಳೆಯ ಕಟ್ಟಡ ನೆಲಸಮಕ್ಕೆ ಸಭೆಯಲ್ಲಿ ನಿರ್ಧಾರ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
