CHITRADURGA NEWS | 30 JULY 2026
ಚಿತ್ರದುರ್ಗ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ನೀಡಲಾಗುವ ಸಾಲ ಸೌಲಭ್ಯಗಳ ಆಯ್ಕೆ ಸಮಿತಿಗೆ, ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಒಬ್ಬರನ್ನು 02 ವರ್ಷಗಳ ಅವಧಿವರೆಗೆ ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸಾಹಿತಿ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ
ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ.
ಈ ಸಮಿತಿಗೆ ನಾಮ ನಿರ್ದೇಶನ ಬಯಸುವ ವ್ಯಕ್ತಿಯು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿದ್ದು, ಕನಿಷ್ಠ 15 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ವಾಸವಾಗಿರಬೇಕು. ನಿವಾಸಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಕನಿಷ್ಠ 35 ವರ್ಷದಿಂದ ಗರಿಷ್ಠ 65 ವರ್ಷ ವಯೋಮಿತಿಯೊಳಗಿರಬೇಕಾಗಿದ್ದು, ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವಿದ್ಯಾಭ್ಯಾಸ ಮಾಡಿರಬೇಕು ಮತ್ತು ಅದಕ್ಕೆ ಸಂಬಂಧಿಸಿದ ಅಂಕಪಟ್ಟಿಯನ್ನು ಲಗತ್ತಿಸಬೇಕು.
ಇದನ್ನೂ ಓದಿ: ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಅಭ್ಯರ್ಥಿಗೆ ಜಿಲ್ಲೆಯ ಸಮಗ್ರ ಮಾಹಿತಿ ಹಾಗೂ ವಿಶ್ವಕರ್ಮ ಜನಾಂಗದವರು ವಾಸಿಸುವ ಸ್ಥಳ, ಕೈಗೊಳ್ಳುತ್ತಿರುವ ಉದ್ಯೋಗ ಇತ್ಯಾದಿ ಅಂಕಿ ಅಂಶಗಳ ಮಾಹಿತಿ ತಿಳಿದಿರಬೇಕು. ಆಯ್ಕೆಯಾಗುವ ವ್ಯಕ್ತಿಯು ವಿಶ್ವಕರ್ಮ ಪಂಚವೃತ್ತಿ ಯೋಜನೆಗಳ ಪರಂಪರಾಗತವಾಗಿ ನಿರ್ವಹಿಸಿರುವ ಅನುಭವ ಹೊಂದಿರಬೇಕು.
ಯಾವುದೇ ರೀತಿಯ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರಬಾರದು ಹಾಗೂ ದಂಡ,ಜುಲ್ಮಾನೆ, ಶಿಕ್ಷೆ ಅನುಭವಿಸಿರಬಾರದು. ಈ ಸಂಬಂದ ಪೊಲೀಸ್ ಇಲಾಖೆಯಿಂದ ದೃಢೀಕರಣ ಪತ್ರವನ್ನು ಪಡೆದು ಸಲ್ಲಿಸುವುದು ಕಡ್ಡಾಯವಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ದಾಖಲೆಗಳೊಂದಿಗೆ ಆಗಸ್ಟ್ 03 ರ ಸಂಜೆ 4 ಗಂಟೆಯೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಇದನ್ನೂ ಓದಿ: ಹಿರಿಯೂರು ಉಪಚುನಾವಣೆ | ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕೆಪಿಸಿಸಿ
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ, ಅಪ್ಪಾಜಿ ಪರಿಸರ ಬಿಲ್ಡಿಂಗ್ ಎದುರಿನ, ಪ್ರಶಾಂತ ನಗರದ 01ನೇ ಕ್ರಾಸ್ನ,ಎನ್.ಲಿಂಗಣ್ಣ ಬಿಲ್ಡಿಂಗ್ನಲ್ಲಿರುವ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

