ಮುಖ್ಯ ಸುದ್ದಿ
ಏಪ್ರಿಲ್ 16, 17 ಸರ್ಕಾರಿ ನೌಕರರ ಕ್ರೀಡಾಕೂಟ | ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ

CHITRADURGA NEWS | 23 MARCH 2025
ಚಿತ್ರದುರ್ಗ: ಮುಂಬರುವ ಏಪ್ರಿಲ್ 16 ಮತ್ತು 17 ರಂದು ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸಲು ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಶನಿವಾರ ಸಂಜೆ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?
ಜಿಲ್ಲಾ ಶಾಖೆಯ 2024-29 ರ ಅವಧಿಗೆ ಆಯ್ಕೆಯಾದ ನೂತನ ನಿರ್ದೇಶಕರಿಗೆ ಪದಾಧಕಾರಿಗಳ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಜಿಲ್ಲಾ ಶಾಖೆಗೆ ಅಧ್ಯಕ್ಷರಾಗಿ ಮಾಲತೇಶ ಮುದಜ್ಜಿ, ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀನಿವಾಸ ಆರ್., ಜಿಲ್ಲಾ ಖಜಾಂಚಿಯಾಗಿ ಮಲ್ಲಿಕಾರ್ಜುನ ಎ, ರಾಜ್ಯ ಪರಿಷತ್ ಸದಸ್ಯರಾಗಿ ರಾಜಪ್ಪ ಎಸ್ ಅವರು ಆಯ್ಕೆಯಾಗಿ, ಅಧಿಕಾರ ವಹಿಸಿಕೊಂಡಿದ್ದರು.
ಇದೀಗ ಜಿಲ್ಲಾ ಶಾಖೆಯ ವಿವಿಧ ಪದಾಧಿಕಾರಿಗಳ ಸ್ಥಾನಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರನ್ನಾಗಿ ನಾರಾಯಣಸ್ವಾಮಿ ಎಂ., ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಬಿ.ಟಿ., ಹಿರಿಯ ಉಪಾಧ್ಯಕ್ಷರಾಗಿ ಡಾ. ಚಂದ್ರಕಾಂತ್ ನಾಗಸಮುದ್ರ, ಉಪಾಧ್ಯಕ್ಷರಾಗಿ ತುಕಾರಾಂರಾವ್ ಬಿ.ವಿ., ವಿಮಲಾಕ್ಷಿ ಬಿ., ಪೂಜಾರ್ ಹೆಚ್. ರುದ್ರಮುನಿ ಬಿ., ನಯಾಜ್ ಅಹ್ಮದ್ ಖಾನ್, ಸಹ ಕಾರ್ಯದರ್ಶಿಯಾಗಿ ಯಶವಂತಕುಮಾರ್, ಸುನೀಲ್‍ಕುಮಾರ್ ಸೇರಿದಂತೆ ಜಂಟಿಕಾರ್ಯದರ್ಶಿಗಳು, ಸಂಘಟನಾ ಕಾರ್ಯದರ್ಶಿಗಳು, ಸಾಂಸ್ಕøತಿಕ ಕಾರ್ಯದರ್ಶಿಗಳು, ಕ್ರೀಡಾ ಕಾರ್ಯದರ್ಶಿಗಳು, ಆಂತರಿಕ ಲೆಕ್ಕ ಪರಿಶೋಧಕರು ಒಳಗೊಂಡಂತೆ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಕಗೊಂಡವರ ಪದಗ್ರಹಣ ಸಮಾರಂಭದಲ್ಲಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.
ಇದನ್ನೂ ಓದಿ: ಬೈಕಿಗೆ ಬಸ್ ಡಿಕ್ಕಿ | ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ | ಜೆಸಿಆರ್ ಬಳಿ ಘಟನೆ
ಬಳಿಕ ಜಿಲ್ಲಾ ಅಧ್ಯಕ್ಷ ಮಾಲತೇಶ್ ಮುದಜ್ಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಆಯೋಜಿಸುವ ಬಗ್ಗೆ ಚರ್ಚಿಸಿ, ಎಲ್ಲ ನೌಕರ ವೃಂದದವರಿಗೂ ಅನುಕೂಲವಾಗುವಂತೆ ಕ್ರೀಡಾಕೂಟವನ್ನು ಏಪ್ರಿಲ್ 16 ಮತ್ತು 17 ರಂದು ನಡೆಸಲು ನಿರ್ಧರಿಸಲಾಯಿತು.
ಒಳಾಂಗಣ ಮತ್ತು ಹೊರಾಂಗಣ ಸ್ಪರ್ಧೆಗಳನ್ನು ಆಯ್ಕೆ ಮಾಡಿಕೊಂಡು, ಎಲ್ಲಾ ತಾಲ್ಲೂಕುಗಳಿಂದ ರಾಜ್ಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ನೌಕರರಿಗೆ ಒಒಡಿ ಸೌಲಭ್ಯ ಕಲ್ಪಿಸುವುದು, ನೌಕರರು ಪಾಲ್ಗೊಳ್ಳಲು ಆನ್‍ಲೈನ್‍ನಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಕೊಳ್ಳಲು ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.
ಇದನ್ನೂ ಓದಿ: ನೀರು ಹಾಯಿಸಲು ಹೋಗಿದ್ದ ರೈತರ ಮೇಲೆ ಕರಡಿ ದಾಳಿ | ಗಂಭೀರ ಗಾಯ
ನೌಕರರು ತಮ್ಮ ಕೆಜಿಐಡಿ ಸಂಖ್ಯೆಯೊಂದಿಗೆ ಆಯಾ ಕಚೇರಿ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಹಾಜರುಪಡಿಸಬೇಕು. ಬೇಸಿಗೆ ಕಾಲವಾಗಿರುವುದರಿಂದ, ಕ್ರೀಡಾಂಗಣದಲ್ಲಿ ಕುಡಿಯುವ ನೀರು, ನೆರಳು, ತುರ್ತು ವೈದ್ಯಕೀಯ ನೆರವು, ಊಟೋಪಹಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಪ್ರತ್ಯೇಕವಾಗಿ ಉಪಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು.
ವಾರ್ಷಿಕ ಕ್ರೀಡಾಕೂಟ ಆಯೋಜನೆ ಕುರಿತಂತೆ ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗುವುದು.
ಇದನ್ನೂ ಓದಿ: Kannada Novel: 25. ಉತ್ತರೆ ಮಳೆ ಸುರಿಯಿತು
ಎಲ್ಲಾ ವೃಂದದ ನೌಕರರ ಸಹಭಾಗಿತ್ವದಲ್ಲಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ಉಪಸಮಿತಿಯವರು, ಪದಾಧಿಕಾರಿಗಳು ತಮಗೆ ವಹಿಸುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಿ ಸಹಕಾರ ನೀಡಬೇಕು ಎಂದು ಅಧ್ಯಕ್ಷ ಮಾಲತೇಶ ಮುದಜ್ಜಿ ಮನವಿ ಮಾಡಿದರು.
ಜಿಲ್ಲಾ ಸಂಘದ ಕಾರ್ಯದರ್ಶಿ ಶ್ರೀನಿವಾಸ ಆರ್., ಖಜಾಂಚಿ ಮಲ್ಲಿಕಾರ್ಜುನ ಎ, ರಾಜ್ಯ ಪರಿಷತ್ ಸದಸ್ಯ ರಾಜಪ್ಪ ಎಸ್ ಸೇರಿದಂತೆ ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
