
ಚಿತ್ರದುರ್ಗ ನ್ಯೂ.ಕಾಂ: ನಾಳೆ ಬೆಳಗ್ಗೆ (ನ.29) ಚಿತ್ರದುರ್ಗ ತಾಲ್ಲೂಕಿನ ಕುರುಮರಡಿಕೆರೆ ಗ್ರಾಮದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಜನತಾ ದರ್ಶನಕ್ಕೆ ತೆರಳುವ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಕುಗ್ರಾಮವಾಗಿರುವ ಕುರುಮರಡಿಕೆರೆಯಲ್ಲಿ ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹ. ಆದರೆ, ಅಲ್ಲಿಗೆ ತೆರಳಲು ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲ.
ಸಮಸ್ಯೆಗಳನ್ನು ಹೊತ್ತು ಅಲ್ಲಿಗ ಸಾಮಾನ್ಯ ಜನ ಹೋಗುವುದು ಕಷ್ಟವಾಗಲಿದೆ. ಕಾರು, ಬೈಕು ಇದ್ದವರು ಹೋಗಬಹುದು, ಆದರೆ, ಏನೂ ಇಲ್ಲದ ಜನರು ಕುರುಮರಡಿಕೆರೆಗೆ ಹೇಗೆ ಬರಲು ಸಾಧ್ಯ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

ನಾಳೆ ಅಂದರೆ ಬುಧವಾರ ಬೆಳಗಿನಿಂದ ಜನತಾ ದರ್ಶನ ಮುಗಿಯುವವರೆಗೆ ksrtc ಬಸ್ಸಿನ ವ್ಯವಸ್ಥೆ ಕಲ್ಪಿಸಿದರೆ ಸಣ್ಣಪುಟ್ಟ ಸಮಸ್ಯಗಳಿರುವ ಜನಸಾಮಾನ್ಯರು ಕೂಡಾ ಬಂದು ತಮ್ಮ ಕಷ್ಟಗಳನ್ನು ಅಧಿಕಾರಿಗಳಿಗೆ ಹೇಳಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅಧ್ಯಕ್ಷತೆಯಲ್ಲಿ ಜನತಾ ದರ್ಶನ
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಗಮನಹರಿಸಿ ಜನತಾ ದರ್ಶನ ಯಶಸ್ವಿ ಮಾಡುವ ಉದ್ದೇಶದಿಂದ ಬಸ್ಸಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ಮಂಗಳವಾರ ರಾತ್ರಿಯೇ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ ಜೆ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರ ಜೊತೆ ಮಾತನಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
| ಕೆ.ಟಿ.ಶಿವಕುಮಾರ್, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
