
CHITRADURGA NEWS | 04 JANUARY 2026
ಚಿತ್ರದುರ್ಗ: ರಾತ್ರಿ ವೇಳೆ ರೈತರ ಜಮೀನುಗಳಿಗೆ ನುಗ್ಗೆ ಅಡಿಕೆ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಭರಮಸಾಗರ ಪೊಲೀಸರು ಬಂಧಿಸಿದ್ದಾರೆ.
ಉಮೇಶ್, ಅಂಜಿನಪ್ಪ, ಕರಿಬಸವ ಹಾಗೂ ಮೌನೇಶ್ ಬಂಧಿತರು. ನಾಲ್ವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಧಾರಣೆ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್
ಸಿರಿಗೆರೆ, ಭರಮಸಾಗರ, ವಿಜಾಪುರ ಸುತ್ತಮುತ್ತ ಗ್ರಾಮಗಳಲ್ಲಿ ಅಲ್ಲಲ್ಲಿ ಅಡಿಕೆ ಕಳ್ಳತನ ನಡೆಯುತ್ತಲೇ ಇತ್ತು.
ಇತ್ತೀಚೆಗೆ ಸಿರಿಗೆರೆಯ ರೈತ ಹರ್ಷ ಎಂಬುವವರ ತೋಟದಲ್ಲಿ ಅಡಿಕೆ ಕಳುವಾಗಿತ್ತು. ಇದಲ್ಲದೆ ೧೫ಕ್ಕೂ ಹೆಚ್ಚು ಕಡೆಗಳಲ್ಲಿ ಅಡಿಕೆ ಕದ್ದಿರುವ ಬಗ್ಗೆ ರೈತರು ಹೇಳಿಕೊಂಡಿದ್ದರು.
ಇದನ್ನೂ ಓದಿ: ಅಡಿಕೆ ಧಾರಣೆ | ಜನವರಿ 2 | ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್
ಈ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸಿಪಿಐ ಪ್ರಸಾದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳರನ್ನು ಬಂಧಿಸಿದ್ದಾರೆ.
ರಾತ್ರೀ ರಾತ್ರಿ ತೋಟಗಳಲ್ಲಿ ಅಡಿಕೆ ಕಳ್ಳತನ ನಡೆಯುತ್ತಿದ್ದ ಕಾರಣ ರೈತರು ನೆಮ್ಮದಿ ಕಳೆದುಕೊಂಡಿದ್ದರು. ಕೆಲವರು ತೋಟಗಳಲ್ಲೇ ಮಲಗಿ ಕಾಯುತ್ತಿದ್ದರು. ಸಿ.ಸಿ.ಟಿವಿ ಕ್ಯಾಮರಾ ಅಳವಡಿಸುತ್ತಿದ್ದರು. ಈಗ ಕಳ್ಳರ ಬಂಧನದಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
