Connect with us

ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ

Arrest of four people who were stealing star tortoise

ಮುಖ್ಯ ಸುದ್ದಿ

ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ

CHITRADURGA NEWS | 25 JUNE 2024

ಹೊಸದುರ್ಗ: ವಿಷ್ಣುವಿನ ವಾಹನ ಎನ್ನುವ ನಂಬಿಕೆ, ಮನೆಯಲ್ಲಿಟ್ಟು ಪೂಜಿಸಿದರೆ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆ ಜೊತೆಗೆ ಅಳಿವಿನ ಅಂಚಿನಲ್ಲಿರುವ ಅಪರೂಪದ ಜೀವಿ ನಕ್ಷತ್ರ ಆಮೆಗಳ ಕಳ್ಳತನ ಪ್ರಕರಣ ಹೊಸದುರ್ಗ ತಾಲೂಕು ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಹೊಸದುರ್ಗ ತಾಲೂಕು ಮತ್ತೋಡು ಹೋಬಳಿಯ ಕಂಚೀನಗರ ಸಮೀಪದ ಕುದುರೆ ಕಣಿವೆ ಗುಡ್ಡಗಾಡು ಪ್ರದೇಶದಲ್ಲಿ ನಕ್ಷತ್ರ ಆಮೆಗಳನ್ನು ಹಿಡಿಯುತ್ತಿದ್ದ ತಂಡದ ಮೇಲೆ ಶ್ರೀರಾಂಪುರ ಪೊಲೀಸರು ದಾಳಿ ನಡೆಸಿ, ಚೀಲದಲ್ಲಿ ತುಂಬಿಕೊಂಡಿದ್ದ 32 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೌಕರ ಸಿ.ಎನ್.ನವನೀತ್ ಅಮಾನತು | ಅನಧಿಕೃತ ಗೈರು ಹಾಜರಿ ಹಿನ್ನೆಲೆ ಆದೇಶ

ಶ್ರೀರಾಂಪುರ ಸಮೀಪದ ಕಂಚಿ ನಗರ ಗ್ರಾಮದ ಹೊರ ವಲಯದಲ್ಲಿ ಶನಿವಾರ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ಓಡಾಡುತ್ತಿದ್ದ ಅಪರಿಚಿತರನ್ನು ಗಮನಿಸಿದ ಸ್ಥಳಿಯರು ಶ್ರೀರಾಂಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನೆಡೆಸಿದ ಶ್ರೀರಾಂಪುರ ಪೊಲೀಸರು ನಕ್ಷತ್ರ ಆಮೆಗಳನ್ನು ಬೇಟೆಯಾಡುತ್ತಿದ್ದವರನ್ನು ಪತ್ತೆ ಹಚ್ಚಿದ್ದಾರೆ. ಬೇಟೆಗಾರರಿಂದ 32 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡು ಚಿಕ್ಕಬಳ್ಳಾಪುರ ಮೂಲದ 3 ಜನ ಹಾಗೂ ಕೋಲಾರ ಮೂಲದ ಒಬ್ಬ ಒಟ್ಟು ನಾಲ್ಕು ಜನರನ್ನು ಬಂಧಿಸಲಾಗಿದೆ.
ಘಟನೆ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕನ್ನಡದಲ್ಲಿ ಗೋವಿಂದ ಎಂ.ಕಾರಜೋಳ ಪ್ರಮಾಣ ವಚನ ಸ್ವೀಕಾರ ‌

ಈ ಬಗ್ಗೆ ವಲಯ ಅರಣ್ಯಧಿಕಾರಿ ಸುನಿಲ್‍ಕುಮಾರ್ ಪ್ರತಿಕ್ರಿಯಿಸಿ, ಮಾರಿಕಣಿವೆ ಹಾಗೂ ಲಕ್ಕಿಹಳ್ಳಿ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ನಕ್ಷತ್ರ ಆಮೆಗಳಿದ್ದು ಅಳಿವಿನ ಅಂಚಿನಲ್ಲಿವೆ. ಇವುಗಳನ್ನು ವಿಷ್ಣುವಿನ ವಾಹನಗಳು ಎಂಬ ನಂಬಿಕೆ ನಮ್ಮ ಜನರಲ್ಲಿದ್ದು ಅವುಗಳನ್ನು ಮನೆಯಲ್ಲಿ ಪೂಜಿಸಿದರೆ ಒಳ್ಳೆಯದಾಗುವುದೆಂಬ ನಂಬಿಕೆ ಇರುವುದರಿಂದ ಇವುಗಳಿಗೆ ಹೆಚ್ಚಿನ ಬೇಡಿಕೆ ಇದೆ ಹಾಗಾಗಿ. ಇವುಗಳನ್ನು ಹಿಡಿದು ಮಾರಾಟ ಮಾಡಲಾಗುತ್ತದೆ. ಈ ಪ್ರಭೇದದ ಪ್ರಾಣಿಗಳು ಅಳಿವಿನ ಅಂಚಿನಲ್ಲಿರುವುದರಿಂದ ಇವುಗಳನ್ನು ಸಂರಕ್ಷಿಸುವುದು ಎಲ್ಲರ ಹೊಣೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತರು ಬರುತ್ತಿದ್ದಾರೆ | ಅಹವಾಲುಗಳಿದ್ದರೆ ಸಲ್ಲಿಸಿ

ಆಡುಮಲ್ಲೇಶ್ವರ ಮೃಗಾಲಯಕ್ಕೆ ಆಮೆಗಳು
ಹೊಸದುರ್ಗ ತಾಲೂಕು ಮತ್ತೋಡು ಬಳಿ ವಶಪಡಿಸಿಕೊಂಡಿರುವ 32 ನಕ್ಷತ್ರ ಆಮೆಗಳನ್ನು ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯದಲ್ಲಿ ಸಂರಕ್ಷಣೆ ಮಾಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version