
CHITRADURGA NEWS | 13 DECEMBER 2025
ಮೊಳಕಾಲ್ಮೂರು: ಬ್ಯಾಂಕುಗಳಿಂದ ಹಣ ಬಿಡಿಸಿಕೊಂಡು ಹೊರಗೆ ಬರುತ್ತಿದ್ದ ಗ್ರಾಹಕರ ಗಮನವನ್ನು ಬೇರೆಡೆ ಹೋಗುವಂತೆ ಮಾಡಿ ಕಳ್ಳತನ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕಿಗೆ ಹೋಗಿ ಹಣ ಬಿಡಿಸಿಕೊಂಡು ಹೊರಗೆ ಬರುತ್ತಿದ್ದವರಿಗಾಗಿ ಕಾಯುತ್ತಿದ್ದ ಆಸಾಮಿ ಗಮನ ಬೇರೆಡೆ ಸೆಳೆದು ಹಣ ದೋಚಿಕೊಂಡು ಪರಾರಿಯಾಗುತ್ತಿದ್ದ.

ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ | ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಈ ಬಗ್ಗೆ ಸಾಕಷ್ಟು ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದವು. ಪ್ರಕರಣ ಬೇಧಿಸಿದ ಮೊಳಕಾಲ್ಮೂರು ಠಾಣೆ ಪೊಲೀಸರು ಭದ್ರಾವತಿ ಮೂಲದ 19 ವರ್ಷದ ಸೂರ್ಯ ಅಲಿಯಾಸ್ ಗಣೇಶ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯಿಂದ ಬರೋಬ್ಬರಿ 4 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 12 |ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ರೇಟ್
ಎಎಸ್‌ಪಿ ಡಾ.ಶಿವಕುಮಾರ್, ಚಳ್ಳಕೆರೆ ಡಿವೈಎಸ್‌ಪಿ ಸತ್ಯನಾರಾಯಣರಾವ್, ಮೊಳಕಾಲ್ಮೂರು ಸಿಪಿಐ ಆರ್.ನಾಗರಾಜ್ ಮಾರ್ಗದರ್ಶನದಲ್ಲಿ ಎಸ್‌ಐ ಮಹೇಶ ಲಕ್ಷ್ಮಣ ಹೊಸಪೇಟೆ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿತ್ತು.
ಸಿಬ್ಬಂದಿಗಳಾದ ಸತೀಶ್, ಖಾದರ್ ಭಾಷಾ, ಶಿವಾನಂದ, ಪ್ರಭುದೇವ, ಹುಲುಗಪ್ಪ ಭೋವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
