
CHITRADURGA NEWS | 06 July 2026
ಚಿತ್ರದುರ್ಗ: ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಐಮಂಗಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಹಿರಿಯೂರು ತಾಲೂಕಿನ ಆದಿರಾಳು ಗ್ರಾಮದ ಸಿದ್ದೇಶ್ ಹಾಗೂ ಆಕಾಶ್ ಬಂಧಿತರು. ಮಠದ ಪಕ್ಕದ ಜಾಗದ ವಿಚಾರವಾಗಿ ಹಲವು ದಿನಗಳಿಂದ ಮನಸ್ತಾಪವಿದ್ದು, ಸದರಿ ವ್ಯಾಜ್ಯ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಇದನ್ನೂ ಓದಿ: ಮಠದ ಜಾಗದ ವಿಚಾರಕ್ಕೆ ಸ್ವಾಮೀಜಿ ಮೇಲೆ ಹಲ್ಲೆ ಆರೋಪ
ಜು.೫ ರಂದು ರಾತ್ರಿ ಸಿದ್ದೇಶ್ ಹಾಗೂ ಆಕಾಶ್ ಹರಳಯ್ಯ ಗುರುಪೀಠವನ್ನು ನಮ್ಮ ಜಮೀನು ಒತ್ತುವರಿ ಮಾಡಿ ಕಟ್ಟಲಾಗಿದೆ ಎಂದು ಆರೋಪಿಸಿ ಶ್ರೀ ಹರಳಯ್ಯ ಸ್ವಾಮೀಜಿ ಮೇಲೆ ಜಾತಿ ನಿಂಧನೆ ಮಾಡಿ ಹಲ್ಲೆ ಮಾಡಿದ್ದಾರೆ.
ಸದರಿ ವಿಚಾರವಾಗಿ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

