CHITRADURGA NEWS | 21 NOVEMBER 2025
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಇದೇ ನ.22 ಮತ್ತು 23 ರಂದು ಚಿತ್ರದುರ್ಗ ನಗರದ ಕೋಟೆ ಸರ್ಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ರೈತ ಸಂಘದಿಂದ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
ನ.22ರಂದು ಬೆಳಿಗ್ಗೆ 11.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಶಾಸಕ ಕೆ.ಸಿ. ವೀರೇಂದ್ರ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಎನ್. ಛಲವಾದಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಎನ್.ದೊಡ್ಡಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಇ.ಸಂಪತ್ ಕುಮಾರ್, ಕೋಟೆ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಡಿ.ವಿಮಲಾ ಭಾಗವಹಿಸುವರು.
ಇದನ್ನೂ ಓದಿ: ಸಾಲ ನೀಡದ ಬ್ಯಾಂಕ್ ಅಧಿಕಾರಿಗಳಿಗೆ ನೋಟೀಸ್ | ಜಿಪಂ ಸಿಇಓ ಡಾ.ಆಕಾಶ್ ಎಚ್ಚರಿಕೆ
ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ ಹಿಂದೂಸ್ತಾನಿ ಕರ್ನಾಟಕ ವಾದ್ಯ ಸಂಗೀತ, ಶಾಸ್ತ್ರೀಯ ಸಂಗೀತ, ಆಶು ಭಾಷಣ, ನಾಟಕ ಏಕವ್ಯಕ್ತಿಗಳ ಸ್ಪರ್ಧೆ ಕಲಾ ಪ್ರಕಾರಗಳಲ್ಲಿ ಎರಡು ದಿನಗಳ ಕಾಲ ಸ್ಪರ್ಧೆಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

