CHITRADURGA NEWS | 02 March 2026
ಚಿತ್ರದುರ್ಗ: ಉಚಿತ ಭಾಗ್ಯಗಳಿಂದ ಯಾವುದೇ ಪ್ರಗತಿ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇತೃತ್ವದ ಸರ್ಕಾರಗಳು ತಮ್ಮ ಚಿಂತನೆಗಳನ್ನು ಬದಲಾಯಿಸಿಕೊಳ್ಳಬೇಕು ಎಂದು ಎಎಪಿ ಜಿಲ್ಲಾಧ್ಯಕ್ಷ ಬಿ.ಇ.ಜಗದೀಶ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಚಳ್ಳಕೆರೆಯಲ್ಲಿ ರೈತರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ | ಸ್ಥಳಕ್ಕೆ ಕೃಷಿ ನಿರ್ದೇಶಕ ಡಾ.ಮಂಜುನಾಥ್ ಭೇಟಿ
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ದೆಹಲಿಯಲ್ಲಿ ಉತ್ತಮ ಆಡಳಿತ ನಡೆಸಿದೆ. ಶಿಕ್ಷಣ ಮತ್ತು ಆರೋಗ್ಯವನ್ನು ಉಚಿತವಾಗಿ ನೀಡುತ್ತಿದೆ ಎಂದರು.
ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದೆ. ಇದರಿಂದ ಜನರನ್ನು ಸಬಲರನ್ನಾಗಿ ಮಾಡಲು ಸಾಧ್ಯವಿಲ್ಲ. ಬದಲಾಗಿ ಉಚಿತ ಶಿಕ್ಷಣ ಮತ್ತು ಆರೋಗ್ಯ ನೀಡುವ ಮೂಲಕ ಜನರನ್ನು ಸದೃಢರನ್ನಾಗಿ ಮಾಡಬೇಕು. ಆದರೆ, ಇಂದಿನ ರಾಜಕಾರಣಿಗಳಿಗೆ ದೇಶದ ಅಭಿವೃದ್ದಿ ಬೇಕಾಗಿಲ್ಲ. ತಮ್ಮ ಅಭಿವೃದ್ಧಿಗಾಗಿ ದೇಶದ ಹಿತ ಬಲಿಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸಿದ್ದು, ಕೇಂದ್ರ ಬಿಜೆಪಿ ಸರ್ಕಾರದ ರಾಜಕೀಯ ಪಿತೂರಿ ಬಯಲಾಗಿದೆ. ಪಂಜಾಬ್ ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದ ಬಳಿಕ ದೇಶಾದ್ಯಂತ ಪಕ್ಷದ ಪ್ರಭಾವ ಹೆಚ್ಚುತ್ತಿರುವುದನ್ನು ಸಹಿಸದ ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಸುಳ್ಳು ಆರೋಪ ಹೊರಿಸಿತ್ತು ಎಂದು ದೂರಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ | ಮೋದಿ ಸಾಧನೆ ಮನೆ ಮನೆಗೆ ಮುಟ್ಟಿಸಲು ಕರೆ
ದೆಹಲಿಯಲ್ಲಿ ಆಡಳಿತ ನಡೆಸಿದ ಎಎಪಿ ನೇತೃತ್ವದ ಸರ್ಕಾರ ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಾದರಿ ಯೋಜನೆಗಳನ್ನು ಜಾರಿಗೆ ತಂದು ಜನಪ್ರಿಯಗೊಳಿಸಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಎಎಪಿ ಬಲ ಕುಗ್ಗಿಸಲು ಯತ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ಮೇಲೆ ಒತ್ತಡ ಹಾಕಿ ಕಳಂಕ ತರುವ ಪ್ರಯತ್ನ ನಡೆಸಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಪಿ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿಲಕ್ಷ್ಮೀ, ಪ್ರಧಾನ ಕಾರ್ಯದರ್ಶಿ ವಿನೋದಮ್ಮ, ರಾಮಪ್ಪ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ತನ್ವೀರ್, ದಾಸಪ್ಪ, ರವಿ, ಫಾರೂಕ್, ತಿಪ್ಪೇಸ್ವಾಮಿ, ಕುಬೇಂದ್ರ ನಾಯ್ಕ್, ಪರಮಣ್ಣ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
