CHITRADURGA NEWS | 12 SEPTEMBER 2026
ಚಿತ್ರದುರ್ಗ: ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮವು 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಆರ್ಯ ವೈಶ್ಯ ಸಮುದಾಯದವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪುರಪ್ರವೇಶ | ಭರ್ಜರಿ ಸ್ವಾಗತಕೋರಿದ ಕೋಟೆನಾಡು
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಗಂಗಾ ಕಲ್ಯಾಣ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಈ ಸೌಲಭ್ಯ ದೊರೆಯಲಿದೆ.
ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ, ಕರ್ನಾಟಕದಲ್ಲಿ ವಾಸವಾಗಿರುವ ಹಾಗೂ ಚಾಲ್ತಿಯಲ್ಲಿರುವ “ನಮೂನೆ-ಜಿ” ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರ ಮೊಬೈಲ್ ಸಂಖ್ಯೆ ಆಧಾರ್‍ನೊಂದಿಗೆ ಜೋಡಣೆಯಾಗಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ತುರುವನೂರು ಹೋಬಳಿಮಟ್ಟದ ಕ್ರೀಡಾಕೂಟ | ಕೂನಬೇವು ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ
ಆಸಕ್ತರು ನಿಗಮದ ವೆಬ್‍ಸೈಟ್ http://kacdc.karnataka.gov.in ಮೂಲಕ ಅಕ್ಟೋಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ನಿಗಮದ ಸಹಾಯವಾಣಿ ಸಂಖ್ಯೆ 9448451111 / 96116 12302 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕ ಹೆಚ್.ಸಿ.ಸಾತ್ವಿಕ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

