CHITRADURGA NEWS | 23 DECEMBER 2025
ಚಿತ್ರದುರ್ಗ: ದೇಶ ಕಂಡ ಅತ್ಯುತ್ತಮ ಪ್ರಧಾನಿ, ವಾಗ್ಮಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಭಾರತೀಯ ಜನತಾ ಪಕ್ಷದಿಂದ ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲೂ ಸಪ್ತಾಹದ ಅಂಗವಾಗಿ ವಾರಪೂರ್ತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಪ್ತಾಹದ ವಿವರಣೆಗಳನ್ನು ನೀಡಿದರು.
ಇದನ್ನೂ ಓದಿ: ಜಿಲ್ಲಾಧಿಕಾರಿ ಸಿಗ್ನೇಚರ್ ಫೋರ್ಜರಿ | ಭೂ ಪರಿವರ್ತನೆಗೆ ಕೃತ್ಯ | FIR ದಾಖಲು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ.24 ರಿಂದ 31ರವರೆಗೆ ಅಟಲ್ ಬಿಹಾರಿ ಜನ್ಮ ಶತಮಾನೋತ್ಸವ ಸಪ್ತಾಹ ಹಮ್ಮಿಕೊಂಡಿರುವುದಾಗಿ ಕೆ.ಟಿ.ಕುಮಾರಸ್ವಾಮಿ ತಿಳಿಸಿದರು.
ಅಟಲ್ ಜೀ ದೇಶದ ಪ್ರಧಾನಿಯಾಗಿದ್ದಾಗ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುವ ಮೂಲಕ ನಗರಕ್ಕೆ ಸಂಪರ್ಕ ಕಲ್ಪಿಸಿದರು ಎಂದು ಸ್ಮರಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಮತ್ತೆ ಚೇತರಿಕೆ ಕಂಡ ರಾಶಿ ಅಡಿಕೆ ಬೆಲೆ
ವಾಜಪೇಯಿ ಅವರ ಜೀವನದ ಸಾಧನೆ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿ ವಿವಿಧ ಯೋಜನೆಗಳ ಕುರಿತು ಹೊಸ ಪೀಳಿಗೆ ತಿಳಿಸುವ ಸಲುವಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಡಿ.24ರ ಬುಧವಾರ ಸಂಜೆ 6.30ಕ್ಕೆ ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಅಟಲಜೀಯವರಿಗೆ ದೀಪ ನಮನ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಮೆಣದ ಬತ್ತಿ ಹಿಡಿದು ಅವರಿಗೆ ನಮನ ಸಲ್ಲಿಸಲಾಗುವುದು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅನುದಾನ ನೀಡಿಲ್ಲ | ಎಚ್.ಡಿ.ಕೆ, ಪ್ರಹ್ಲಾದ್ ಜೋಷಿ ಕೇಳಲ್ಲ | ದಿನೇಶ್ ಗುಂಡೂರಾವ್
ಡಿ.25ರ ಗುರುವಾರ ನಗರದ ಎಸ್,ಆರ್.ಬಿ.ಎಂ.ಎಸ್ ರೋಟರಿ ಬಾಲಭವನದಲ್ಲಿ ಬೆಳಿಗ್ಗೆ 11ಕ್ಕೆ ಅಟಲ್ ವಿರಾಸತ್ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ಡಾ.ಎಂ,ಚಂದ್ರಪ್ಪ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನೇರ್ಲಗುಂಟೆ ತಿಪ್ಪೇಸ್ವಾಮಿ, ಎಸ್.ಕೆ.ಬಸವರಾಜನ್, ಮಂಡಲದ ಅಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಅಟಲ್ ವೃಕ್ಷ ಯೋಜನೆಯಡಿ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ 10 ಸಸಿಗಳನ್ನು ನಡೆಲಾಗುವುದು ಇದರ ಉಸ್ತುವಾರಿಯನ್ನು ಶಾಲೆಯ 8ನೇ ತರಗತಿಯ ಮಕ್ಕಳಿಗೆ ವಹಿಸಲಾಗುವುದು. ಅವರು 10ನೇ ತರಗತಿಗೆ ಬರುವವರೆಗೂ ಸಹಾ ಈ ಸಸಿಗಳನ್ನು ಪಾಲನೆ ಮಾಡಿ ಬೆಳಸುವ ಹೊಣೆಗಾರಿಕೆಯನ್ನು ಅವರಿಗೆ ನೀಡಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 23 | ಹತ್ತಿ ರೇಟ್ ಎಷ್ಟಿದೆ?
ಅಟಲ್ ಸ್ಮೃತಿ ಸಮ್ಮೇಳನವನ್ನು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಡಿ.25 ರಿಂದ 31ರ ತನಕ ಅಟಲ್‍ಜೀ ರವರ ಜೀವನ ಸಾಧನೆಗಳು ಕುರಿತ ಸಮ್ಮೇಳನದಲ್ಲಿ ಬೂತ್ ಮಟ್ಟದಲ್ಲಿ ತಿಳಿಸಲಾಗುವುದು. ಅಟಲ್ ಜೀ ಅವರ ಜೀವನ ಕುರಿತ ಪ್ರದರ್ಶನವನ್ನು ಏರ್ಪಡಿಸಲಾಗುವುದೆಂದು ಕುಮಾರಸ್ವಾಮಿ ತಿಳಿಸಿದರು.
ಆಟಲ್ ಬಿಹಾರಿ ವಾಜಿಪೇಯಿ ಅವರ ಜನ್ಮ ಶತಮಾನೋತ್ಸವದ ಸಹ ಸಂಚಾಲಕ ಮಲ್ಲಿಕಾರ್ಜನ್ ಮಾತನಾಡಿ, ಮಾಜಿ ಪ್ರಧಾನ ಮಂತ್ರಿ ಆಟಲ್ ಬಿಹಾರಿ ವಾಜಿಪೇಯಿ ಆಜಾತ ಶೃತ್ರುವಾಗಿದ್ದರು. ದೇಶದ ಅಭಿವೃದ್ದಿಯಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಸರ್ವ ಶಿಕ್ಷಾ ಅಭಿಯಾನದಡಿ ಗ್ರಾಮೀಣ ಪ್ರದೇಶದ ಶಾಲೆಗಳ ಗುಣಮಟ್ಟ ಹೆಚ್ಚಿಸವ ಮಹತ್ವದ ಕೆಲಸ ಮಾಡಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: ಸ್ವ-ಉದ್ಯೋಗ | ರುಡ್‌ಸೆಟ್ ಸಂಸ್ಥೆಯಿಂದ ಉಚಿತ ತರಬೇತಿ
ಸುದ್ದಿಗೋಷ್ಟಿಯಲ್ಲಿ ಜನ್ಮ ಶತಮಾನೋತ್ಸವ ಸಂಚಾಲಕ ಸಂಪತ್ ಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪಾಲಯ್ಯ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
