
CHITRADURGA NEWS | 13 SEPTEMBER 2024
ಚಿತ್ರದುರ್ಗ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ 17 ವರ್ಷದ ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ನಗರದ ಜ್ಞಾನವಿಕಾಸ ಶಾಲೆ ಬಳಿ ಸಂಜೆ ಇಕೋ ಕಾರಿನಲ್ಲಿ ಬಂದ ಯುವಕರು ಬಾಲಕಿಯ ಕೈ ಹಿಡಿದು ಎಳೆದಾಡಿದ್ದಾರೆ ಎಂದು ದೂರಲಾಗಿದೆ.
ಇದನ್ನೂ ಓದಿ: ಸಾಲ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ
ಬಾಲಕಿ ಅಪಹರಣ ಯತ್ನದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆ ಅಡಿಯಲ್ಲಿ ದೂರು ದಾಖಲಾಗಿದೆ.
ಇಕೋ ವಾಹನದ ಚಾಲಕ ಹಾಗೂ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪಾತಲಿಂಗಪ್ಪ ಹಾಗೂ ಆನಂದ್ ಬಂಧಿತರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಇದನ್ನೂ ಓದಿ: ಸೆಪ್ಟಂಬರ್ 15 ರಂದು ಹೆದ್ದಾರಿಯ ಎಡ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
