CHITRADURGA NEWS | 09 OCTOBER 2025
ಚಿತ್ರದುರ್ಗ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ನ್ಯಾಯಾಲಯದ ಕಾರ್ಯಕಲಾಪದ ವೇಳೆಯಲ್ಲಿ ಶೂ ಎಸೆದು ಅಗೌರವ ಮಾಡಿರುವ ನ್ಯಾಯವಾದಿ ರಾಕೇಶ್ ಕಿಶೋರ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸಮಾನ ಮನಸ್ಕರ ವಕೀಲರ ಬಳಗದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಷ್ಟ್ರಪತಿರವರಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು | ಈರುಳ್ಳಿ ಸುರಿದು ಪ್ರತಿಭಟನೆ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನ್ಯಾಯವಾದಿ ಬೀಸನಹಳ್ಳಿ ಜಯಣ್ಣ, ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ವಕೀಲ ರಾಕೇಶ್ ಕಿಶೋರ್ ಸಂವಿಧಾನಕ್ಕೆ ಅವಮಾನ ಮಾಡಿರುವುದು ಕ್ಷಮಿಸಲಾರದಂತಹ ಅಪರಾಧ.
ಇದರ ಹಿಂದೆ ಪಟ್ಟಭದ್ರಾ ಹಿತಾಸಕ್ತಿಗಳ ಕೈವಾಡವಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ ಮುಖ್ಯ ನ್ಯಾಯಮೂರ್ತಿ ಗವಾಯಿರವರಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಮಳೆಗೆ 13 ಮನೆ ಹಾನಿ | ಮಳೆಯ ವಿವರ ಇಲ್ಲಿದೆ….
ವಕೀಲರ ಸಂಘದ ಮಾಜಿ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ವಕೀಲರಾದ ಎಸ್.ವಿಜಯಕುಮಾರ್, ದಿಲ್‍ಶಾದ್ ಉನ್ನಿಸ, ಬಿ.ಎಂ.ಹನುಮಂತಪ್ಪ, ಚಂದ್ರಣ್ಣ, ಜಗದೀಶ್ ಗುಂಡೇರಿ, ಸುದರ್ಶನ್, ಗಂಗಾಧರ್, ಅಶೋಕ್‍ಬೆಳಗಟ್ಟ, ಸುರೇಶ್, ದಿವ್ಯಚಂದ್ರ, ಕವಿ ಅರಸಿ, ಅನುಷ ಬಿಂದು ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
