
CHITRADURGA NEWS | 23 NOVEMBER 2025
ಚಿತ್ರದುರ್ಗ: ನಗರದ ಗಾಂಧಿ ವೃತ್ತದಲ್ಲಿ ಆಟೋ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಅದೃಷ್ಟವಶಾತ್ ಪ್ರಾಣಾಪಯಾದಿಂದ ಪಾರಾಗಿದ್ದಾರೆ.
ಫೈನ್ ಕಟ್ಟುವ ವಿಚಾರದಲ್ಲಿ ಟ್ರಾಫಿಕ್ ಪೊಲೀಸರ ಜೊತೆ ನಡೆದ ವಾಗ್ವಾದ ಈ ಹಂತಕ್ಕೆ ತಲುಪಿದೆ ಎನ್ನಲಾಗಿದೆ.
ಇದನ್ನೂ ಓದಿ: RTO ಕಚೇರಿ ಪ್ರಕರಣಗಳಲ್ಲಿ ಶೇ.50 ರಿಯಾಯಿತಿ | ಡಿಸೆಂಬರ್ 12 ಕೊನೆಯ ದಿನ
ಡ್ರಿಂಕ್ ಅಂಡ್ ಡ್ರೈವ್ ಕಾರಣಕ್ಕೆ ಪೊಲೀಸರು ದಂಡ ವಿಧಿಸಿದ್ದು, ಈ ವಿಚಾರದಲ್ಲಿ ಆಟೋ ಚಾಲಕ ತಿಪ್ಪೇಸ್ವಾಮಿ ಹಾಗೂ ಸ್ಥಳದಲ್ಲಿದ್ದ ಸಂಚಾರಿ ಠಾಣೆ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 22 | ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಇಂದಿನ ರೇಟ್
ಈ ವೇಳೆ ಆಟೋ ಚಾಲಕ ತಿಪ್ಪೇಸ್ವಾಮಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸಾರ್ವಜನಿಕರು ಬೆಂಕಿ ನಂದಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
