ಮುಖ್ಯ ಸುದ್ದಿ
ಚಿತ್ರದುರ್ಗ ನಗರದಲ್ಲಿ 27 ಕಡೆ ಆಟೋ ಪಾರ್ಕಿಂಗ್ ವ್ಯವಸ್ಥೆ
CHITRADURGA NEWS | 18 APRIL 2025
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವತಿಯಿಂದ ನಗರದಲ್ಲಿ 27 ಕಡೆ ಆಟೋ ಪಾರ್ಕಿಂಗ್‍ಗಾಗಿ ಜಾಗ ಗುರುತಿಸಲಾಗಿದ್ದು, ಈಗಾಗಲೇ 12 ಆಟೋ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಇನ್ನೂ 15 ಆಟೋ ಪಾರ್ಕಿಂಗ್ ಬಾಕಿ ಇದೆ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದರು.
Also Read: ರಾಶಿ ಅಡಿಕೆ ಬೆಲೆ 58 ಸಾವಿರದತ್ತ ದಾಪುಗಾಲು
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಚಿತ್ರದುರ್ಗ ನಗರದ ಗಾಂಧಿ ವೃತ್ತದಿಂದ ಪ್ರವಾಸಿ ಮಂದಿರ ಮಾರ್ಗದ ರಸ್ತೆಯ ಪಕ್ಕದಲ್ಲಿ ಆಟೋಗಳನ್ನು ಸಾಲಾಗಿ ನಿಲ್ಲಿಸುತ್ತಿದ್ದಾರೆ. ನಿಯಮಿತವಾಗಿ ತಪಾಸಣೆ ನಡೆಸಿ, ಆಟೋಗಳನ್ನು ನಿಲ್ಲಿಸದಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಂಚಾರಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
Also Read: ಹೊಳಲ್ಕೆರೆ, ಅಮೃತಪುರ ನಿಲ್ದಾಣದಲ್ಲಿ ಹೊಸಪೇಟೆ-ಬೆಂಗಳೂರು ರೈಲು ನಿಲುಗಡೆ | ಗೋವಿಂದ ಕಾರಜೋಳ