ಮುಖ್ಯ ಸುದ್ದಿ
ಚಿತ್ರದುರ್ಗ ಜಿಲ್ಲೆಯ ಮೂವರು ಪತ್ರಕರ್ತರಿಗೆ ಇಂದು ಪ್ರಶಸ್ತಿ ಪ್ರದಾನ
CHITRADURGA NEWS | 03 FEBRUARY 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೂವರು ಪತ್ರಕರ್ತರು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇದೇ ಮೊದಲ ಬಾರಿಗೆ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ಚಿತ್ರದುರ್ಗ-ಚಿಕ್ಕಮಗಳೂರು ಅಂತರ್ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಇಬ್ಬರು ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದೆ.
ಇದನ್ನೂ ಓದಿ: ಚಳ್ಳಕೆರೆ ಎಡಿಎಲ್‍ಆರ್ ಲೋಕಾಯುಕ್ತ ಬಲೆಗೆ
ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಹಿರಿಯ ಪತ್ರಕರ್ತರಾದ ಜಿ.ಎಸ್.ಉಜ್ಜನಪ್ಪ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜಿ.ಎಸ್.ಉಜ್ಜನಪ್ಪ
ಈ ಹಿಂದೆ ಉಷಾಕಿರಣ, ಈಟಿವಿ ಕನ್ನಡ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿ ಸದ್ಯ ವಿಜಯವಾಣಿ ದಾವಣಗೆರೆ ಆವೃತ್ತಿಯ ಹಿರಿಯ ಉಪಸಂಪಾದಕರಾಗಿ ಕೆಲಸ ಮಾಡುತ್ತಿರುವ ಈ.ಮಹೇಶ್ ಬಾಬು ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಸಿರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಚಲನ ಚಿತ್ರಗಳ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಬಿ.ಎಲ್.ವೇಣು
ಇನ್ನೂ ಸುದ್ದಿಗಿಡುಗ, ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್, ಕನ್ನಡಪ್ರಭ, ದಿ ಸಂಡೇ ಇಂಡಿಯನ್ ಹಾಗೂ ಸದ್ಯ ವಿಜಯ ಕರ್ನಾಟಕ ಚಿತ್ರದುರ್ಗ ವಿಶೇಷ ವರದಿಗಾರರಾಗಿರುವ ಎಂ.ಎನ್.ಅಹೋಬಲಪತಿ ಅವರು ಪತ್ರಕರ್ತರ ಸಂಘದ ‘ಗುಡಿಹಳ್ಳಿ ನಾಗರಾಜ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ.
ಇದನ್ನೂ ಓದಿ: ಕೇಂದ್ರ ಬಜೆಟ್‍ನಲ್ಲಿ ಚಿತ್ರದುರ್ಗ ರೈಲ್ವೇಗೆ ಬಂಪರ್
ಮೂರು ಜನ ಹಿರಿಯ ಪತ್ರಕರ್ತರು ಒಂದೇ ದಿನ ಬೇರೆ ಬೇರೆ ವೇದಿಕೆಗಳಲ್ಲಿ ಪ್ರಶಸ್ತಿ, ಸನ್ಮಾನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ.