CHITRADURGA NEWS | 27 JANUARY 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸತತ ಐದು ವರ್ಷಗಳ ಕಾಲ ಅಪಘಾತ ರಹಿತ ಹಾಗೂ ಅಪರಾಧ ರಹಿತ ಸೇವೆ ಸಲ್ಲಿಸಿದ ಚಿತ್ರದುರ್ಗ ಘಟಕದ ಚಾಲಕ ಆರ್.ಮನೋಹರ ಅವರಿಗೆ ‘ಬೆಳ್ಳಿ ಪದಕ’ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ
ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಚಾಲಕ ಆರ್.ಮನೋಹರ್ ಅವರಿಗೆ ಬೆಳ್ಳಿ ಪದಕ ಪ್ರದಾನ ಮಾಡಿದರು.
ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವತಿಯಿಂದ ನೀಡಲಾಗುವ 2022ನೇ ಸಾಲಿನ ಈ ಪ್ರಶಸ್ತಿಯು ಬೆಳ್ಳಿ ಪದಕ, ಪ್ರಶಂಸನಾ ಪತ್ರ ಹಾಗೂ ರೂ. 2,000 ನಗದು ಪುರಸ್ಕಾರ ನೀಡಲಾಯಿತು.
ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಧ್ಯಾರೆಡ್ಡಿ ಆಯ್ಕೆ | ಕಸಾಪ ಘೋಷಣೆ
ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಸೇರಿದಂತೆ ಮತ್ತಿತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
