CHITRADURGA NEWS | 27 MAY 2026
ಚಿತ್ರದುರ್ಗ: ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಜ್ಞಾನ, ಯಶಸ್ಸು ಲಭಿಸಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
ನಗರದ ಎಸ್ಎಂಎಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗು ತಾಲ್ಲೂಕು ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ, ಕುವರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಶಿಸ್ತಿನಿಂದ ಅಭ್ಯಸಿಸಿದರೆ ಎಂತಹ ಕಠಿಣ ಪರೀಕ್ಷೆಗಳನ್ನು ಎದುರಿಸುವ ಧೈರ್ಯ ಬರುತ್ತದೆ. ಕನ್ನಡ ಅನ್ನದ ಭಾಷೆ, ನಿಮ್ಮ ಮನೆಯ ಭಾಷೆ. ಮಾತೃಭಾಷೆಯಲ್ಲಿ ಉತ್ತಮ ಜ್ಞಾನವಿದ್ದರೆ ಉಳಿದ ವಿಷಯಗಳಲ್ಲಿ ನೀವು ಅದ್ಭುತವಾದ ಸಾಧನೆಯನ್ನು ಮಾಡಬಹುದಾಗಿದೆ ಈ ವಿಷಯದಲ್ಲಿ ನೀವು ಪ್ರೌಢಹಂತದಲ್ಲಿಯೇ 125ಕ್ಕೆ 125 ಅಂಕಗಳನ್ನು ಪಡೆದಿರುವುದು ಶ್ಲಾಘನೀಯ ಎಂದರು.
ಕನ್ನಡವನ್ನು ಚೆನ್ನಾಗಿ ಅಭ್ಯಾಸ ಮಾಡಿದರೆ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯವಾಗುತ್ತದೆ. ಬಹುತೇಕ ಗ್ರಾಮೀಣ ಪ್ರದೇಶಗಳಿಂದ ಬಂದಿರುವ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ಉತ್ತಮ ಸಾಧನೆ ಮಾಡಿ ನೀವು ಇನ್ನೊಬ್ಬರನ್ನು ಸನ್ಮಾನಿಸುವ ಹಂತಕ್ಕೆ ಬೆಳೆಯಬೇಕು ಎಂದು ಹೇಳಿದರು.
ಇದನ್ನೂ ಓದಿ: ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳ | ಕಸಾಪ ಅಧ್ಯಕ್ಷ ಶಿವಸ್ವಾಮಿ
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಕನ್ನಡ ವಿಷಯ ಪರಿವೀಕ್ಷಕ ಸಿ.ರಂಗನಾಯ್ಕ ಮಾತನಾಡಿ, ಕನ್ನಡ ವಿಷಯದಲ್ಲಿ ಈ ಬಾರಿ ಜಿಲ್ಲೆಯಲ್ಲಿ 196 ವಿದ್ಯಾರ್ಥಿಗಳು 125ಕ್ಕೆ 125 ಅಂಕಗಳನ್ನು ಪಡೆದಿರುವುದು ಹೆಮ್ಮೆಯ ಸಂಗತಿ. ಈ ವಿದ್ಯಾರ್ಥಿಗಳು ಕನ್ನಡವನ್ನು ಬೆಳೆಸುವ ರಾಯಭಾರಿಗಳಾಗಿರಿ.
ಕನ್ನಡ ವ್ಯಾಕರಣ, ಛಂದಸ್ಸು, ಪ್ರಬಂಧಗಳನ್ನು ಸುಲಭವಾಗಿ ಬರೆಯಬಲ್ಲ ಸಾಮರ್ಥ್ಯ ನಿಮಗಿದೆ. ಭವಿಷ್ಯದಲ್ಲಿ ಕನ್ನಡ ಪ್ರೇಮವನ್ನು ರೂಢಿಸಿಕೊಳ್ಳಬೇಕು ಎಂದು ಜಿ.ಪಿ.ರಾಜರತ್ನಂ ಅವರ ಕನ್ನಡ ಪ್ರೇಮವನ್ನು ಉದಾಹರಣೆಯಾಗಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಕನ್ನಡಭಾಷೆ ಇಂಗ್ಲೀಷ್ಗಿಂತ ಕಠಿಣವಾದುದು. ಆದರೆ, ಮಾತೃಭಾಷೆಯಾದ್ದರಿಂದ ನಿಮಗೆ ಸಾಧನೆ ಮಾಡಲು ಸಾಧ್ಯವಾಗಿದೆ. ನಿಮ್ಮ ಕನ್ನಡ ಪ್ರೇಮ ಹೀಗೆ ಇರಲಿ ಮುಂದೆ ನಿಮ್ಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗುತ್ತದೆ. ವಿದ್ಯಾಭ್ಯಾಸದ ಮುಂದಿನ ಹಂತಗಳಲ್ಲಿ ನೀವು ಯಾವ ಭಾಷೆಯಲ್ಲಾದರೂ ಜ್ಞಾನ ಪಡೆಯಿರಿ ಕನ್ನಡವನ್ನು ಮರೆಯಬೇಡಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
ಚಿತ್ರದುರ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವಿ.ಎಲ್.ಪ್ರಶಾಂತ್, ಇಂಡಿಯಾನ ಎಸ್ಜೆಎಂ ಹಾರ್ಟ್ ಸೆಂಟರ್ನ ಕಾರ್ಯನಿರ್ವಾಹಕ ಅಧಿಕಾರಿ ರೂಪೇಶ್ಕುಮಾರ್ ಶೆಟ್ಟಿ ಮಾತನಾಡಿದರು. ಕಸಾಪ ಜಿಲ್ಲಾ ಕೋಶಾಧ್ಯಕ್ಷ ಡಾ.ಚೌಳೂರು ಲೋಕೇಶ್ ಮತ್ತಿತರರಿದ್ದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಕನ್ನಡ ವಿಷಯ ಪರೀಕ್ಷೆಯಲ್ಲಿ 125ಕ್ಕೆ 125 ಅಂಕ ಪಡೆದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

