
CHITRADURGA NEWS | 04 MARCH 2026
ಚಿತ್ರದುರ್ಗ: ತಂಬಾಕು ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಮನಸ್ಸು ತನ್ನ ಹತೋಟಿಯಲ್ಲಿರುವುದಿಲ್ಲ. ಇಂತಹ ಅಮಲಿನ ಸ್ಥಿತಿಯಲ್ಲಿಯೇ ಅರಿಯದಂತೆ ಹಲವು ಅಪರಾಧ ಕೃತ್ಯಗಳು ಜರುಗುತ್ತವೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ ತಿಳಿಸಿದರು.
ಇದನ್ನೂ ಓದಿ: ಜಿಲ್ಲಾಸ್ಪತ್ರೆ | ಮಕ್ಕಳ ಉಚಿತ ಹೃದಯ ತಪಾಸಣೆ
ನಗರದ ಜಿಲ್ಲಾ ಕಾರಾಗೃಹದಲ್ಲಿ ಈಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ತಂಬಾಕು ಸೇವನೆಯ ದುಷ್ಪರಿಣಾಮಗಳ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದುಶ್ಚಟಗಳು ಕೇವಲ ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲದೆ, ಇಡೀ ಕುಟುಂಬದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಮಾದಕ ವ್ಯಸನಕ್ಕೆ ಬಲಿಯಾದಾಗ ವಿವೇಚನಾ ಶಕ್ತಿ ಕುಂದುತ್ತದೆ. ಆದ್ದರಿಂದ ದುಶ್ಚಟಗಳಿಂದ ದೂರವಿರಲು ಸಲಹೆ ನೀಡಿದರು.
ಜೈಲರ್ ರಾಜೇಂದ್ರ ಕೋಪರ್ಡೆ ಮಾತನಾಡಿ, ಕಾರಾಗೃಹದಲ್ಲಿ ನೀಡಲಾಗುವ ಇಂತಹ ಜಾಗೃತಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು. ಇಲ್ಲಿ ಕಲಿತ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಂಬಾಕು ಮುಕ್ತ ಜೀವನ ನಡೆಸಬೇಕು ಎಂದರು.
ಇದನ್ನೂ ಓದಿ: ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ | WhatsApp ಸಹಾಯವಾಣಿ ವಿವರ ಇಲ್ಲಿದೆ…
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ ಅವರು ತಂಬಾಕು ವ್ಯಸನದಿಂದ ಮುಕ್ತರಾಗಲು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉಚಿತ ಚಿಕಿತ್ಸೆ ಮತ್ತು ಆಪ್ತಸಮಾಲೋಚನೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ಜೈಲರ್ ರಾಮಣ್ಣ ಹೆರಕಲ್, ಶಿಕ್ಷಕ ಶ್ರೀರಾಮರೆಡ್ಡಿ, ಡಾ. ಅಕ್ಷತಾ ಹಾಗೂ ಕಾರಾಗೃಹದ ಸಿಬ್ಬಂದಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

