CHITRADURGA NEWS | 29 APRIL 2026
ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಮಾತನಾಡಿದ ವೈದ್ಯಾಧಿಕಾರಿ ಡಾ. ಪೂಜಾ ಅವರು, ಮಲೇರಿಯಾ ರೋಗದ ಲಕ್ಷಣಗಳ ಬಗ್ಗೆ ವಿವರಿಸಿ, ‘ಮಲೇರಿಯಾ ಕೊನೆಗೊಳಿಸಲು ಅಗತ್ಯ ಕ್ರಮಗಳ ಚಾಲನೆಯನ್ನು ಈಗ ನಾವು ಮಾಡೋಣ ಮತ್ತು ಮಾಡುತ್ತೇವೆ” ಎಂಬ ಘೋಷವಾಕ್ಯದ ಮೂಲಕ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು.
ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಮೇಲ್ವಿಚಾರಕ ನಾಗರಾಜ್ ಅವರು ಮಲೇರಿಯಾ ಹರಡುವುದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸುದೀರ್ಘವಾಗಿ ಮಾಹಿತಿ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ ಅವರು ಮಲೇರಿಯಾ ರೋಗದ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ, ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಿದರು.
ಇದನ್ನೂ ಓದಿ: ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

