Connect with us

    Awareness Educational Loan: ಆರ್ಯವೈಶ್ಯ ಅಭಿವೃದ್ಧಿ ನಿಗಮ | ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ

    ಮುಖ್ಯ ಸುದ್ದಿ

    Awareness Educational Loan: ಆರ್ಯವೈಶ್ಯ ಅಭಿವೃದ್ಧಿ ನಿಗಮ | ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ

    CHITRADURGA NEWS | 09 NOVEMBER 2024

    ಚಿತ್ರದುರ್ಗ: ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ(Awareness Educational Loan) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

    ಕ್ಲಿಕ್ ಮಾಡಿ ಓದಿ: ಸಿರಿಗೆರೆಯಲ್ಲಿ ತರಳಬಾಳು ನುಡಿಹಬ್ಬಕ್ಕೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಚಾಲನೆ 

    ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸುವವರು ಸಿ.ಇ.ಟಿ, ಎನ್.ಇ.ಇ.ಟಿ(ನೀಟ್) ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸು ಹಾಗೂ ಪಿ.ಹೆಚ್.ಡಿಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 1.00 ಲಕ್ಷ ಸಾವನ್ನು ಶೇ.2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ.

    ವ್ಯಾಸಂಗ ಪೂರ್ಣಗೊಂಡ 04 ತಿಂಗಳ ವಿರಾಮಾವಧಿ ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರು ಪಾವತಿಸಬೇಕು. ಅರ್ಜಿದಾರರು 18-35 ವರ್ಷದೊಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 6.00 ಲಕ್ಷ ಮಿತಿಯೊಳಗಿರುವ ಅರ್ಹ ಅಭ್ಯರ್ಥಿಗಳು kacdc.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: 

    ಅರ್ಜಿದಾರನು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು). ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಖಾಯಂ ವಿಳಾಸವು ರಾಜ್ಯದಲ್ಲಿರಬೇಕು. ಅರ್ಜಿದಾರನು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ರಷ್ಟು ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

    ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಚನ್ನಗಿರಿ, ಭೀಮಸಮುದ್ರ, ಶಿವಮೊಗ್ಗ ಸೇರಿ ವಿವಿಧ ಮಾರುಕಟ್ಟೆಗಳ ಅಡಿಕೆ ರೇಟ್

    ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 9448451111 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top