ಮುಖ್ಯ ಸುದ್ದಿ
Air Pollution: ವಾಯು ಮಾಲಿನ್ಯ ದುಷ್ಪರಿಣಾಮ ಕುರಿತು SRS ಕಾಲೇಜಿನಲ್ಲಿ ಜಾಗೃತಿ
CHITRADURGA NEWS | 14 NOVEMBER 2024
ಚಿತ್ರದುರ್ಗ: ನಗರದ ಎಸ್‍ಆರ್‍ಎಸ್ (SRS) ಪಿಯು ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಾಲಾ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ 2024-25ನೇ ಸಾಲಿನ ನವೆಂಬರ್ ಮಾಹೆಯಲ್ಲಿ ವಾಯುಮಾಲಿನ್ಯ(air pollution) ದುಷ್ಪಾರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಲಾಗಿತ್ತು.
ಕ್ಲಿಕ್ ಮಾಡಿ ಓದಿ: ಗಿರಿಜನ ಉಪ ಯೋಜನೆಯಡಿ SME ಘಟಕಗಳ ಸ್ಥಾಪನೆ | ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಘೆ ಮಾತನಾಡಿ, ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಆಚರಿಸಲಾಗುತ್ತಿದ್ದು, ವಾಹನಗಳ ಪ್ರದೋಷಣೆಯಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ನವೆಂಬರ್-2024ರ ಮಾಹೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಆಚರಿಸಲಾಗುತ್ತಿದ್ದು, ಒಂದು ತಿಂಗಳ ಕಾಲ ವಾಯುಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ಸಂಬಂಧ ಬಿತ್ತಿಪತ್ರಗಳನ್ನು ಹಾಗೂ ಕರಪತ್ರಗಳನ್ನು ಹಂಚಲಾಗುತ್ತಿದ್ದು, ವಾಯುಮಾಲಿನ್ಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
ಜಿಲ್ಲಾಧಿಕಾರಿಗಳ ಆದೇಶದನ್ವಯ ಶಾಲಾ ವಾಹನಗಳ ವಿವರ, ಸಿಬ್ಬಂದಿಗಳ ವಿವರ ಹಾಗೂ ಖಾಸಗಿ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕಿಯರನ್ನು ನಿಯೋಜಿಸಿರುವ ಕುರಿತು ಮಾಹಿತಿ ನೀಡಬೇಕು. ಖಾಸಗಿ ಶಾಲೆಗಳಲ್ಲಿರುವ ವಾಹನಗಳಿಗೆ ಸಂಬಂಧಪಟ್ಟಂತೆ ಖಾಸಗಿ ಶಾಲೆಗಳಲ್ಲಿ ಶಾಲಾ ವಾಹನಗಳು ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳ ಕಾರ್ಯಾಚರಣೆ ಮಾಡುವಂತಿಲ್ಲ ಎಂದು ಮಾಹಿತಿ ನೀಡಿದರು.
18 ವರ್ಷ ವಯೋಮಾನದ ಒಳಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಲು ನಿರ್ಬಂಧಿಸುವುದು ಹಾಗೂ ನೀಡುವುದು ದಂಡನಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ
ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಡಿವೈಎಸ್‍ಪಿ ದಿನಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಸೇರಿದಂತೆ ಖಾಸಗಿ ಶಾಲಾ ಮುಖ್ಯಸ್ಥರು ಇದ್ದರು.