
CHITRADURGA NEWS | 13 NOVEMBER 2024
ಚಿತ್ರದುರ್ಗ: ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ(Ayyappa Swamy) ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮವನ್ನು ನ.16 ರಿಂದ 2025 ಜನವರಿ 13 ರವರೆಗೆ ನೆರವೇರಲಿದೆ.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್
60 ದಿನಗಳ ಕಾಲ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸ್ವಾಮಿಗಳಿಗೆ ಉಚಿತ ಅನ್ನದಾನ ಕಾರ್ಯಕ್ರಮ ನೆರವೇರಸಲಾಗುವುದು.
ನ.16 ರಂದು ಬೆಳಿಗ್ಗೆ 11 ಗಂಟೆಗೆ ಗಣ ಹೋಮ ಶ್ರೀ ಚಂಡಿಕಾ ಹೋಮ ಪೂಜಾ ಕಾರ್ಯಕ್ರಮ ನೆರವೇರಲಿದೆ.
ಮಧ್ಯಾಹ್ನ 12.45 ಕ್ಕೆ ಪೂರ್ಣಾವತಿ ನಡೆಯುವುದು. ಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ವರ್ತಕರಾದ ಉದಯ ಶೆಟ್ಟಿ ಉದ್ಘಾಟಿಸುವರು.
ಕ್ಲಿಕ್ ಮಾಡಿ ಓದಿ: ಮತ್ತಷ್ಟು ಹೆಚ್ಚಾಯ್ತು ವಿವಿ ಸಾಗರದ ಒಳಹರಿವು | ಭರ್ತಿಯಾಗಲು ಇನ್ನೆಷ್ಟು ಅಡಿ ಬಾಕಿ
ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸುವರು.
ಡಿಸೆಂಬರ್ 18 ರಂದು ಸಂಜೆ 7 ಗಂಟೆಗೆ 18 ಮೆಟ್ಟಿಲುಗಳ ಪಡಿಪೂಜ ಕಾರ್ಯಕ್ರಮ.
ಡಿಸೆಂಬರ್ 22 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹಾ ಅನ್ನದಾನ ಕಾರ್ಯಕ್ರಮ.
ಜನವರಿ 13 ರಂದು ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ದೇವರ ಆಭರಣ ಮೆರವಣಿಗೆ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ನರೇಗಾ ತಾಂತ್ರಿಕ ಸಹಾಯಕ ಹುದ್ದೆಯಿಂದ ವಜಾ
ಜನವರಿ 14 ರಂದು ಮಕರ ಸಂಕ್ರಮಣದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ಇರುತ್ತದೆ.
ಎಲ್ಲಾ ಪೂಜಾ ಕಾರ್ಯಕ್ರಮಕ್ಕೆ ಚಿತ್ರದುರ್ಗದ ಸಕಲ ಭಕ್ತಾದಿಗಳು ಭಾಗವಹಿಸಬೇಕೆಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
