CHITRADURGA NEWS | 18 DECEMBER 2025
ಚಿತ್ರದುರ್ಗ: ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 26ನೇ ವರ್ಷದ ಬ್ರಹ್ಮೋತ್ಸವದ ಅಂಗವಾಗಿ ಧ್ವಜ ಪೂಜೆ ನೆರವೇರಿಸಲಾಯಿತು.
ಮೂರನೇ ದಿನದ ಪೂಜಾ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ಸುದರ್ಶನ ಹೋಮ, ಅಭಿಷೇಕ, ಉಶಂ ಪೂಜೆ, ಅಭಿಷೇಕ, ನವಕಂಪ, ಕಳಸ ಪೂಜೆ, ಅಷ್ಟ ದೇವತೆಗಳಿಗೆ ಬಲಿ ಅರ್ಪಿಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಕೇರಳದ ಅರ್ಚಕರದ ವಿಷ್ಣು ಭಟ್ಟಾದ್ರಿ ಪಾಡ್ ತಂತ್ರಿಗಳು ತ್ರಿಶೂರ್ ಹಾಗೂ ಸತೀಶ್ ಶರ್ಮ ತಂಡದಿಂದ ಪೂಜಾ ಕಾರ್ಯಗಳು ಜರುಗಿದವು. ಇದೇ ವೇಳೆ ಕೇರಳದ ಚಂಡೇವಾದ್ಯ ಪೂಜೆ ಮಾಡಲಾಯಿತು.
ದೇವಸ್ಥಾನ ಸಮಿತಿ ಅಧ್ಯಕ್ಷ ಶರಣ್ ಕುಮಾರ್, ಉಪಾಧ್ಯಕ್ಷ ಮಲ್ಲಿಕಾರ್ಜುನ್, ಕಾರ್ಯದರ್ಶಿ ಎಂ.ಪಿ.ವೆಂಕಟೇಶ್, ಸದಸ್ಯರಾದ ವಿ.ಜಿ.ಮೋಹನ್, ಜಗದೀಶ್, ಸೂರಯ್ಯ, ಇಂದ್ರಣ್ಣ, ಚಂದ್ರಶೇಖರ್, ಗುರುಸ್ವಾಮಿ ರಮೇಶ್, ಬ್ರಹ್ಮೋತ್ಸವದ ಸೇವಾಕರ್ತರುಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
