CHITRADURGA NEWS | 11 JULY 2024
ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಬಳಿ ಜನರ ಸಂಚಾರಕ್ಕೆ ರೂ.1.48 ಕೋಟಿ ವೆಚ್ಚದ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡಲು ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ ಎಂದು ಗೋವಿಂದ ಎಂ ಕಾರಜೋಳ ತಿಳಿಸಿದರು.
ಇದನ್ನೂ ಓದಿ: HIGHWAY; ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆಯನ್ನು ಹೆದ್ದಾರಿ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ | ಗೋವಿಂದ ಕಾರಜೋಳ

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ವಿಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ದಿನವೂ ಸಾರ್ವಜನಿಕರು, ಶಾಲಾ ಮಕ್ಕಳು ಹೆದ್ದಾರಿ ದಾಟಿಕೊಂಡು ಓಡಾಡಬೇಕಿದೆ. ಇಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.
ಬಿ.ಜಿ.ಕೆರೆ ಬಳಿಯ ಹೆದ್ದಾರಿ ಕಾಮಗಾರಿಯಿಂದ ಬಿ.ಜಿ.ಕೆರೆ ಗ್ರಾಮ ಎರೆಡು ಸೀಳಾಗಿ ಓಳಾಗಿದ್ದು, ಪ್ರತಿನಿತ್ಯ ಜನರು, ಶಾಲಾ ಮಕ್ಕಳು ಓಡಾಟ ಮಾಡಲು ತೊಂದರೆಯಾಗಿರುವ ಬಗ್ಗೆ ಸಾಕಷ್ಟು ವರದಿಯಾಗಿದೆ. ಫೂಟ್ ಓವರ್ ಬ್ರಿಡ್ಜ್ ನಿರ್ಮಾಣರಿಂದ ಶಾಲಾ ಮಕ್ಕಳು ಹಾಗೂ ಸ್ಥಳೀಯರಿಗೆ ಉಪಯೋಗವಾಗಲಿದೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
