
CHITRADURGA NEWS | 03 JUNE 2024
ಚಿತ್ರದುರ್ಗ: 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ಬಿ.ಐ.ಇ.ಆರ್.ಟಿ ಹುದ್ದೆಗೆ ಸ್ಪೆಷಲ್ ಡಿ.ಇಡಿ ಹಾಗೂ ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ನೇರಗುತ್ತಿಗೆ ಮೂಲಕ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ತಡರಾತ್ರಿ ಅಬ್ಬರಿಸಿದ ಮಳೆರಾಯ | ತುಂಬಿ ಹರಿದ ಹಳ್ಳಕೊಳ್ಳ

ಅರ್ಜಿ ಸಲ್ಲಿಸುವ ವಿಧಾನ : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇದೇ ಜೂನ್ 7ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬಹುದು.
ಇದನ್ನೂ ಓದಿ: ಐತಿಹಾಸಿಕ ನಗರ ಚಿತ್ರದುರ್ಗಕ್ಕೆ ಒಂದೇ ಸಿಟಿ ಬಸ್ | ಸಾರಿಗೆ ಸೌಲಭ್ಯಕ್ಕೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ
ಹೆಚ್ಚಿನ ಮಾಹಿತಿಗಾಗಿ: ಕಚೇರಿ ವೇಳೆಯಲ್ಲಿ ಇಲಾಖೆಗೆ ಅಥವಾ ದೂರವಾಣಿ ಸಂಖ್ಯೆ 8747912806 ಮತ್ತು 8073269824 ಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
