
CHITRADURGA NEWS | 30 JUNE 2024
ಚಿತ್ರದುರ್ಗ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ನಗರದ ರೈಲ್ವೆ ಸ್ಟೇಷನ್ ಸಮೀಪದ ವಾಸಿ ಬಿ.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಶೀಘ್ರದಲ್ಲೇ ಕೇಂದ್ರೀಯ ವಿದ್ಯಾಲಯ | ಗೋವಿಂದ ಕಾರಜೋಳ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಬಿ.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಿ.ಮಂಜುನಾಥ್‍ಗೆ ನೇಮಕಾತಿ ಪತ್ರ ನೀಡಲಾಯಿತು.ಕಾಂಗ್ರೆಸ್ ಎಸ್ಟಿ ಸೆಲ್ ಅಧ್ಯಕ್ಷರಾಗಿ ಬಿ.ಮಂಜುನಾಥ್ ನೇಮಕ
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಜಿಲ್ಲೆಯಾದ್ಯಂತ ಸಂಚರಿಸಿ ಪರಿಶಿಷ್ಟ ಪಂಗಡ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.
ಇದನ್ನೂ ಓದಿ: ಎಪಿಎಂಸಿ ಮಾಜಿ ನಿರ್ದೇಶಕ ಹುಲ್ಲೂರು ಎಸ್.ಎನ್.ಲೋಕೇಶ್ ನಿಧನ
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಬಸವರಾಜ್, ಚಾಂದ್‍ಪೀರ್ ಸೇರಿದಂತೆ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
