ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್‍ಕುಮಾರ್ ವರ್ಗಾವಣೆ ಮಾಡಿದ್ದಾರೆ.
ಬಿ.ಎಸ್.ರೇಖಾ ಅವರನ್ನು ಯಾದಗಿರಿ ಜಿಲ್ಲಾ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಿದ್ದು, ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಾಗಿ ತುಮಕೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ.ಗೀತಾ ಅವರನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಪುನಃ ಬಂಧನ ಭೀತಿಯಲ್ಲಿ ಶಿವಮೂರ್ತಿ ಮುರುಘಾ ಶರಣರು
ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶರನ್ನೇ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ಮಠದ ಆಡಳಿತದ ಹೊಣೆ ವಹಿಸಿಕೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

