ಮುಖ್ಯ ಸುದ್ದಿ
ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಹಿನ್ನೆಲೆ | ಡಿಸಿ ಸರ್ಕಲ್‍ನಲ್ಲಿ ಪೊಲೀಸ್ ಸರ್ಪಗಾವಲು

CHITRADURGA NEWS | 28 JUNE 2024
ಚಿತ್ರದುರ್ಗ: ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಒನಕೆ ಓಬವ್ವ ವೃತ್ತಕ್ಕೆ ಬಂದು ಸೇರುವ ಎಲ್ಲ ರಸ್ತೆಗಳಲ್ಲಿ ಪೊಲೀಸರು ನಾಕಾಬಂದಿ ಹಾಕುತ್ತಿದ್ದಾರೆ.

ಇದನ್ನೂ ಓದಿ:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ಆಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯ ರಾಜಿನಾಮೆಗೆ ಒತ್ತಾಯಿಸಿ ವೀರ ಮದಕರಿಯ ನಾಡು ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ವಹಿಸಿಕೊಂಡಿದ್ದು, ಚಿತ್ರದುರ್ಗದ ಮೂಲಕ ರಾಜ್ಯಕ್ಕೆ ಸಂದೇಶ ರವಾನಿಸುವ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: 4.80 ಕೋಟಿ ವಂಚಿಸಿ ವಿಯೆಟ್ನಾಂ ಸೇರಿದ್ದ ಆರೋಪಿ ಅಂದರ್ | ಕೋಡೆ ರಮಣಯ್ಯನಿಗೆ ಹೆಡೆಮುರಿ ಕಟ್ಟಿದ ಚಿತ್ರದುರ್ಗ ಪೊಲೀಸ್
ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಎಲ್ಲ ಅಗತ್ಯ ಸಿದ್ಧತೆಗಳನ್ನು ಒನಕೆ ಓಬವ್ವ ವೃತ್ತದಲ್ಲಿ ಮಾಡಿಕೊಂಡಿದ್ದಾರೆ.
ಸ್ಥಳದಲ್ಲಿ ನೂರಾರು ಪೊಲೀಸರು ಬೀಡು ಬಿಟ್ಟಿದ್ದಾರೆ. ಸಾಕಷ್ಟು ಬ್ಯಾರಿಕೇಡ್ ಅಳವಡಿಸಿದ್ದಾರೆ. ಅಹಿತಕರ ಘಟನೆ ನಡೆಯದಂತೆ ತಡೆಯಲು ಸ್ಥಳದಲ್ಲೇ ಫೈಯರ್ ಇಂಜಿನ್ ಕೂಡಾ ಮೊಕ್ಕಾಂ ಹೂಡಿದೆ.
ಇದನ್ನೂ ಓದಿ: ರೈತರಿಗೆ ಹಾಲಿನ ಪ್ರೋತ್ಸಾಹ ಧನ ಯಾವಾಗ ಕೊಡ್ತಿರಾ | ಬಿಜೆಪಿ ಮುಖಂಡ ವೆಂಕಟೇಶ್ ಯಾದವ್
ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯಲು KSRTC ಬಸ್ಸುಗಳು, ಪೊಲೀಸ್ ಟಿಟಿ ವಾಹನ, ಜೀಪ್‍ಗಳನ್ನು ತಂದು ನಿಲ್ಲಿಸಲಾಗಿದೆ.
ವಾಲ್ಮೀಕಿ ನಾಯಕ ಸಮುದಾಯ ಚಿತ್ರದುರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವುದು ಜೊತೆಗೆ ಪಾಳೆಯಗಾರರ ಆಳ್ವಿಕೆ ಇದ್ದ ಚಿತ್ರದುರ್ಗದಿಂದ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ಮಾಡಿರುವ ಬಿಜೆಪಿ ರಾಜ್ಯದ ಗಮನ ಸೆಳೆಯಲು ಚಿತ್ರದುರ್ಗದಿಂದಲೇ ಪ್ರತಿಭಟನೆಗೆ ನಿರ್ಧಾರ ಮಾಡಿದೆ.
ಇದನ್ನೂ ಓದಿ: ಬಂದೂಕಿನಿಂದ ಬಾಲಕ ಸಾವು | ಮೂರು ತಿಂಗಳ ನಂತರ ನಿಗೂಢ ಸಾವಿನ ತನಿಖೆ
ಪಕ್ಕದ ಆಂಧ್ರಪ್ರದೇಶದ ಚುನಾವಣೆಗೆ ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಹೋಗಿದೆ ಎಂದು ಆಪಾದಿಸುತ್ತಿರುವ ಬಿಜೆಪಿ, ಈ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆ ಪಡೆದು ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಆದರೆ, ಎಲ್ಲವೂ ಮುಖ್ಯಮಂತ್ರಿಗಳ ಕಣ್ಣೋಟದಲ್ಲೇ ನಡೆದಿದ್ದು, ಈ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಚಿತ್ರದುರ್ಗದಿಂದ ಒತ್ತಾಯ ಮಾಡುತ್ತಿದೆ.
