
CHITRADURGA NEWS | 17 JUNE 2026
ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಗಳಿಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವೆಬ್‍ಸೈಟ್ https://ssp.postmatric.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅಥವಾ ಇಮೇಲ್ bcwdhelpline@gmail.com ಮೂಲಕ ಸಂಪರ್ಕಿಸಬಹುದು. ತಾಂತ್ರಿಕ ನೆರವಿಗಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ 1902 ಅಥವಾ ಇಮೇಲ್ postmatrichelp@karnataka.gov.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಆಗಿ ಎಚ್.ರವಿಶಂಕರ್ ನಿಯುಕ್ತಿ
ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

