
CHITRADURGA NEWS | 28 JULY 2025
ಚಿತ್ರದುರ್ಗ: ಜುಲೈ 25 ರಂದು ಹಿರಿಯೂರಿನಲ್ಲಿ ನಡೆದ ಐಸಿಎಸ್‌ಇ ವಿಭಾಗದ ಝೊನಲ್ ಹಂತದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಐಸಿಎಸ್‌ಇ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಉಪಾಧ್ಯರ ಚುನಾವಣೆ | ಶಕೀಲಾಬಾನು ಅವಿರೋಧ ಆಯ್ಕೆ
ಐಸಿಎಸ್‌ಇ ವಿಭಾಗದ ವಿದ್ಯಾರ್ಥಿಗಳು ಬಾಲಕರ ಸಿಂಗಲ್ಸ್ 10ನೇ ತರಗತಿಯ ಎಸ್.ಜಿ.ಶ್ರೇಯಸ್, ಬಾಲಕಿಯರ ಡಬಲ್ಸ್ನಲ್ಲಿ 8ನೇ ತರಗತಿಯ ವಿದ್ಯಾರ್ಥಿನಿಯರಾದ ಎಂ.ಜೆ.ವರ್ಷ, ಕೆ.ಜಿ. ವೃಂದಾ ಪ್ರಥಮ ಸ್ಥಾನ ಪಡೆದಿದ್ದಾರೆ.
ಜುಲೈ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಿಜನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಜುಲೈ 26 ರಂದು ನಡೆದ ಐಸಿಎಸ್‌ಇ ವಿಭಾಗದ ಝೊನಲ್ ಹಂತದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಐಸಿಎಸ್‌ಇ ಶಾಲೆಯ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶಂಕರ್ ತಂಡ, 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಹೆಚ್.ಶೋಭಿತ್ ತಂಡ ಪ್ರಥಮ ಸ್ಥಾನಗಳಿಸಿದ್ದಾರೆ
ಜುಲೈ 31 ಹಾಗೂ ಆಗಸ್ಟ್ 1 ರಂದು ಬೆಂಗಳೂರಿನಲ್ಲಿ ನಡೆಯುಲಿರುವ ರಿಜನಲ್ ಹಂತಕ್ಕೆ 2 ತಂಡಗಳು ಆಯ್ಕೆಯಾಗಿದ್ದಾವೆ.
ಇದನ್ನೂ ಓದಿ: ಮದಗದ ಕೆರೆ ಭರ್ತಿ | ವಿವಿ ಸಾಗರದ ಕಡೆಗೆ ಹರಿವು | ಭದ್ರೆಗಿಂತ ಮೊದಲೇ ವೇದಾವತಿ ಒಡಲಿಗೆ ನೀರು
ಝೊನಲ್ ವಿಭಾಗದಿಂದ ಬೆಂಗಳೂರಿನಲ್ಲಿ ನಡೆಯುವ ರಿಜನಲ್ ವಿಭಾಗಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಎಸ್.ಎಂ.ಪೃಥ್ವೀಶ, ನಿರ್ದೇಶಕರಾದ ಪಿ.ಸಿ.ಸುನಿತಾ, ಐಸಿಎಸ್‌ಇ ಪ್ರಾಚಾರ್ಯ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಎನ್.ಜಿ.ತಿಪ್ಪೇಸ್ವಾಮಿ ಸೇರಿದಂತೆ ಶಿಕ್ಷಕರು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
