
CHITRADURGA NEWS | 25 AUGUST 2025
ಚಿತ್ರದುರ್ಗ: ನಗರಸಭೆಯ 72 ಮಹಿಳಾ ಪೌರ ಕಾರ್ಮಿಕರಿಗೆ ಜಿಲ್ಲಾ ಪೌರ ಕಾರ್ಮಿಕರ ಸಂಘದಿಂದ ಗೌರಿ-ಗಣೇಶ್ ಹಬ್ಬದ ಕೊಡುಗೆಯಾಗಿ ಎಲೆ ಅಡಿಕೆ, ಹೂವು, ಹಣ್ಣು, ಬಳೆ, ಸೀರೆಯಿರುವ ಬಾಗಿನ ನೀಡಲಾಯಿತು.
ಇದನ್ನೂ ಓದಿ: ಬ್ಯಾಕ್‍ಲಾಗ್ ಹುದ್ದೆಗಳ ನೇಮಕಕ್ಕೆ ಒತ್ತಾಯ
ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‍ಕುಮಾರ್ ಭಂಡಾರು ಮಹಿಳಾ ಪೌರ ಕಾರ್ಮಿಕರಿಗೆ ಬಾಗಿನ ಅರ್ಪಿಸಿ ಮಾತನಾಡಿ, ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಮಹಿಳೆಯರಿಗೆ ತವರು ಮನೆಯಿಂದ ಬಾಗಿನ ನೀಡುವುದು ಹಿಂದಿನಿಂದಲೂ ನಡೆದು ಬಂದಿರುವ ಪದ್ದತಿ. ಜಿಲ್ಲಾ ಪೌರ ಕಾರ್ಮಿಕರ ಸಂಘದವರು ಬಾಗಿನ ಅರ್ಪಿಸಿ ಗೌರವಿಸುತ್ತಿರುವುದು ಅತ್ಯುತ್ತಮವಾದುದು ಎಂದು ಶ್ಲಾಘಿಸಿದರು.
ಉದ್ಯಮಿ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ, ಮಹಿಳಾ ಪೌರ ಕಾರ್ಮಿಕರು ಯಾರು ಮೇಲು-ಕೀಳಲ್ಲ. ಅವರವರ ಕೆಲಸದ ಮೇಲೆ ಗೌರವ ಸಿಕ್ಕೆ ಸಿಗುತ್ತದೆ. ದಿನ ಬೆಳಗಾದರೆ ನಗರವನ್ನು ಸ್ವಚ್ಚಗೊಳಿಸುವ ಪೌರ ಕಾರ್ಮಿಕರ ಕೆಲಸ ಅತ್ಯಂತ ಪವಿತ್ರವಾದುದು.
ಒಳ ಮೀಸಲಾತಿಯಡಿ ಮಾದಿಗರಿಗೆ ರಾಜ್ಯ ಸರ್ಕಾರ ಶೇ.6 ರಷ್ಟು ಮೀಸಲಾತಿ ನೀಡಿರುವುದನ್ನು ಸದುಪಯೋಗಪಡಿಸಿಕೊಂಡು ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ. 61 ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.
ಡಿವೈಎಸ್ಪಿ ದಿನಕರ್ ಮಾತನಾಡಿ, ಮಹಿಳಾ ಪೌರ ಕಾರ್ಮಿಕರಿಗೆ ಬಾಗಿನ ನೀಡುತ್ತಿರುವುದು ಅತ್ಯಂತ ಶ್ರೇಷ್ಟವಾದುದು. ಮುಂದಿನ ವರ್ಷ ಈ ಕಾರ್ಯಕ್ರಮವನ್ನು ನಗರಸಭೆಯಲ್ಲಿ ಅದ್ದೂರಿಯಾಗಿ ಮಾಡುವಂತೆ ಸಲಹೆ ನೀಡಿದರು.
ಇದನ್ನೂ ಓದಿ: ಸಿರಿಯಜ್ಜಿ ಸ್ಮಾರಕ ಲೋಕಾರ್ಪಣೆ | ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಆಗ್ರಹ
ಈ ಸಂದರ್ಭದಲ್ಲಿ ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷರುಗಳಾದ ಕುಂಚಿಗನಹಾಳ್ ಮಹಲಿಂಗಪ್ಪ, ರಂಗಪ್ಪ, ಪ್ರಧಾನ ಕಾರ್ಯದರ್ಶಿ ಕೆ.ರಾಜಣ್ಣ, ಖಜಾಂಚಿ ಗೋವಿಂದ, ಸಹ ಕಾರ್ಯದರ್ಶಿ ನಿಜಲಿಂಗ, ಆಂಜನೇಯ(ಬಾಲು) ಏಕಾಂತಪ್ಪ, ಮಹಾಂತೇಶ್, ನಗರಸಭೆ ಅಧ್ಯಕ್ಷೆ ಸುಮಿತಾ, ಪೌರಾಯುಕ್ತರಾದ ರೇಣುಕಾ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
