Connect with us

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ | ನವೆಂಬರ್ 8 ರಂದು ಆದೇಶ ಪ್ರಕಟ ಸಾಧ್ಯತೆ

ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು

ಮುಖ್ಯ ಸುದ್ದಿ

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ | ನವೆಂಬರ್ 8 ರಂದು ಆದೇಶ ಪ್ರಕಟ ಸಾಧ್ಯತೆ

ಚಿತ್ರದುರ್ಗ ನ್ಯೂಸ್.ಕಾಂ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಕ್ತಾಯವಾಗಿದೆ.

ಹೈಕೋರ್ಟ್‍ನಲ್ಲಿ ನಡೆದ ಸುಧೀರ್ಘ ವಿಚಾರಣೆ ಮುಕ್ತಾಯವಾಗಿದ್ದು, ಶರಣರ ಪರವಾಗಿ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.

ಶರಣರ ವಿರುದ್ಧವಾಗಿ ಮೈಸೂರಿನ ಒಡನಾಡಿ ಸಂಸ್ಥೆ ನಿಂತಿದ್ದು, ಸಂಸ್ಥೆಯ ಪರವಾಗಿ ನ್ಯಾಯವಾದಿ ಡಿ.ಸಿ.ಶ್ರೀನಿವಾಸ್ ವಾದ ಮಂಡಿಸಿದ್ದಾರೆ.

ಎರಡೂ ಕಡೆಯ ವಾದ-ವಿವಾದಗಳನ್ನು ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಏಕಸದಸ್ಯ ಪೀಠ, ಮಂಗಳವಾರ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ. ಜಾಮೀನು ಕುರಿತ ಹೈಕೋರ್ಟ್ ಆದೇಶ ನವೆಂಬರ್ 8 ರಂದು ನೀಡುವ ಸಂಭಾವ್ಯ ದಿನಾಂಕ ತಿಳಿಸಿದೆ.

ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ವ್ಯವಸ್ಥಿತ ಪಿತೂರಿ

ಕಳೆದ ವಾರ ಶರಣರ ಪರವಾಗಿ ವಾದ ಮಂಡಿಸಿದ್ದ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್, ಮುರುಘಾ ಶರಣರ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ಮುರುಘಾ ಮಠ ಹಾಗೂ ಮುರುಘಾ ಶರಣರಿಗೆ ಕಳಂಕ ತರುವ ಪ್ರಯತ್ನ ನಡೆದಿದೆ ಎಂದು ಅಭಿಪ್ರಾಯಪಟ್ಟಿದ್ದರು.

ಇನ್ನೂ ಮಂಗಳವಾದ ಪ್ರತಿವಾದ ಮಾಡಿದ್ದ ಒಡನಾಡಿ ಸಂಸ್ಥೆಯ ಪರ ವಕೀಲ ಡಿ.ಸಿ.ಶ್ರೀನಿವಾಸ್, ಆರೋಪಿ ಸ್ವಾಮೀಜಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು, ಅವರಿಗೆ ಜಾಮೀನು ನೀಡಿದರೆ ಸಂತ್ರಸ್ಥ ಬಡ ಮಕ್ಕಳಿಗೆ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಮಕ್ಕಳನ್ನು ಲೈಂಗಿಕವಾಗಿ ಶೋಷಣೆ ಮಾಡಿರುವ ಸ್ವಾಮೀಜಿ ವಿರುದ್ಧ ಈಗಾಗಲೇ ಮಕ್ಕಳು ಮ್ಯಾಜಿಸ್ಟ್ರೇಟ್ ಎದುರು ಸಂಪೂರ್ಣ ವಿವರ ನೀಡಿದ್ದಾರೆ. ಇದನ್ನು ನ್ಯಾಯಪೀಠ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಮುರುಘಾ ಶರಣರ ಪ್ರಕರಣದ ಹಿನ್ನೆಲೆ:

ಮುರುಘಾ ಮಠದ ಪೀಠಾಧಿಪತಿಗಳಾದ ಶ್ರೀ ಶಿವಮೂರ್ತಿ ಮುರುಘಾ ಶರಣರು, ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಠದ ಹಾಸ್ಟೆಲ್‍ನಲ್ಲಿದ್ದ ಇಬ್ಬರು ಬಾಲಕಿಯರು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022 ಆಗಸ್ಟ್ 26 ರಂದು ದೂರು ದಾಖಲಿಸಿದ್ದರು.

ದೂರು ಆಧರಿಸಿ ಶ್ರೀಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆ ಹಾಗೂ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಘೂ ಬಾಲ ನ್ಯಾಯ ಕಾಯ್ದೆ ಅನ್ವಯ ವಿವಿಧ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು.

ದೂರಿನ ಆಧಾರದಲ್ಲಿ 2022 ಸೆಪ್ಟಂಬರ್ 1 ರಂದು ಮಠದಿಂದ ಶ್ರಿ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿ, ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರಿಸಲಾಗಿದೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version