
CHITRADURGA NEWS | 21 MARCH 2024
ಚಿತ್ರದುರ್ಗ: 2023ರಲ್ಲಿ ನಡೆದ ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಸೇರಿದಂತೆ 11 ಮಂದಿ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಬುಧವಾರ ಚಿತ್ರದುರ್ಗದ ಜೆಎಂಎಫ್‍ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಧ್ಯರಾತ್ರಿ ಪಟಾಕಿ ಸಿಡಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್‍ಗೆ ಜೆಎಂಎಫ್‍ಸಿ ನ್ಯಾಯಾಲಯದಿಂದ ಜಾಮೀನು
ಈ ಕುರಿತು ತನಿಖೆ ನಡೆಸಿದ ಪೊಲೀಸರು ನಗರದ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ದೋμÁರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಾಸಕರು ಸೇರಿದಂತೆ 11 ಮಂದಿ ಬೆಂಬಲಿಗರಿಗೆ ಸಮನ್ಸ್ ಜಾರಿ ಮಾಡಿದ್ದರಿಂದ ಬುಧವಾರ ಎಲ್ಲರೂ ನ್ಯಾಯಾಧೀಶರ ಎದುರು ಹಾಜರಾಗಿದ್ದರು.
ಇದನ್ನೂ ಓದಿ: ಮತದಾನ ಪ್ರಮಾಣ ಶೇ.5 ರಷ್ಟು ಹೆಚ್ಚಿಸಲು ಪಣ | ಸಿಇಓ ಎಸ್.ಜೆ.ಸೋಮಶೇಖರ್
ಎಲ್ಲರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿದೆ ಎಂದು ಶಾಸಕರ ಪರ ವಕೀಲ ಉಮೇಶ್ ಮಾಹಿತಿ ನೀಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
