CHITRADURGA NEWS | 18 JUNE 2024
ಚಿತ್ರದುರ್ಗ: ಬಕ್ರಿದ್ ಹಬ್ಬದ ಪ್ರಯುಕ್ತ ನಗರದ ಚಂದ್ರವಳ್ಳಿ ಹಾಗೂ ದಾವಣಗೆರೆ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ ಮುಂದೂಡಿಕೆ
ಶ್ವೇತ ವಸ್ತ್ರದಾರಿಗಳಾಗಿದ್ದ ಮುಸ್ಲಿಂರು ತಲೆಗೆ ಬಿಳಿ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ತೊಡಗಿದ್ದರು. ಕೆಲವರು ಮನೆಯಿಂದ ಚಾಪೆ, ಜಮಖಾನ ತಂದು ನೆಲದಲ್ಲಿ ಹಾಸಿಕೊಂಡು ಅಲ್ಲಾನನ್ನು ಪ್ರಾರ್ಥಿಸಿದರು.
ಚಂದ್ರವಳ್ಳಿ ಫೈರಿಂಗ್ ರೇಂಜ್ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಇಲಾಹಿಮುನ್ನ, ಮೆಹಬೂಬ್‍ಖಾನ್, ಅಯೂಬ್, ರಿಜ್ವಾನ್, ಇರ್ಫಾನ್, ಎಜಾಜ್, ಅಶ್ವಾಖ್, ವಿಖಾರ್, ನಾಸಿರ್, ಗೌಸ್‍ಪೀರ್ ಇನ್ನು ಅನೇಕರು ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ: ಕೆಡಿಪಿ ಸಭೆ ಮುಂದೂಡಿಕೆ ಹಿಂದೆ ರಾಜಕೀಯ ಲೆಕ್ಕಚಾರ | ಸರಳವಾಗಿ ಬಿಡಿಸಿಟ್ಟ ಸಂಸದ ಗೋವಿಂದ ಎಂ.ಕಾರಜೋಳ
ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಎ.ಜಾಕಿರ್‍ಹುಸೇನ್, ಚಾಂದ್‍ಪೀರ್ ಸೇರಿದಂತೆ ನೂರಾರು ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ತೊಡಗಿದ್ದರು.
ಪ್ರಾರ್ಥನೆಯ ನಂತರ ಪರಸ್ಪರರು ಅಪ್ಪಿಕೊಂಡು ಬಕ್ರಿದ್ ಹಬ್ಬದ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು.
ಇದನ್ನೂ ಓದಿ: ಗ್ಯಾರೆಂಟಿಗೆ ಹಣ ಹೊಂದಿಸಲು ಸರ್ಕಸ್ | ಸಂಸದ ಗೋವಿಂದ ಎಂ.ಕಾರಜೋಳ ವಾಗ್ದಾಳಿ
ಈ ವೇಳೆ ದಾವಣಗೆರೆ ರಸ್ತೆಯಲ್ಲಿ ಬ್ಯಾರಿಕೇಡ್‍ಗಳನ್ನು ಅಡ್ಡವಿಟ್ಟು ಪೊಲೀಸರು ಸಂಚಾರವನ್ನು ನಿಯಂತ್ರಿಸುತ್ತಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
