
CHITRADURGA NEWS | 07 JUNE 2025
ಹೊಳಲ್ಕೆರೆ: ಬಕ್ರೀದ್ ಹಬ್ಬದ ಪ್ರಯುಕ್ತ ಪಟ್ಟಣದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಜೊತೆ ಶಾಸಕ ಎಂ.ಚಂದ್ರಪ್ಪ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
Also Read: ಭರಮಸಾಗರ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿಡಿಓ ಅಮಾನತಿಗೆ ಆಗ್ರಹ

ನಂತರ ಮಾತನಾಡಿದ ಅವರು, ಚುನಾವಣೆಯಲ್ಲಿ ನನಗೆ ಮತ ಹಾಕಿದವರು, ಹಾಕದವರು ಎಂದೆಣಿಸದೆ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುತ್ತಿದ್ದೇನೆ. ಯಾರಿಗೂ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.
ಎಲ್ಲಾ ಜಾತಿ ಧರ್ಮದವರು ಸಹಬಾಳ್ವೆ, ಸಹೋದರರಂತೆ ಇರಬೇಕು. ಜಾತಿ, ಧರ್ಮಕ್ಕಿಂತ ಮನುಷ್ಯತ್ವ, ಮಾನವೀಯತೆ ದೊಡ್ಡದು. ಖುರಾನ್, ಭಗವದ್ಗೀತೆ, ಬೈಬಲ್ ಎಲ್ಲದರ ಸಾರ ಶಾಂತಿ. ಹಾಗಾಗಿ ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
